ಬೆಂಗಳೂರು: ನಗರದ ಖಾಸಗಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹನಿಯೂರು ಚಂದ್ರೇಗೌಡ ವಿರುದ್ಧ ಹೊರಿಸಲಾಗಿದ್ದ ಮಾನನಷ್ಟ ಆರೋಪಗಳಿಂದ ಅವರನ್ನು ನಗರದ ನ್ಯಾಯಾಲಯ ಖುಲಾಸೆಗೊಳಿಸಿದೆ.

‘ನಾನು ವಾಮ ಮಾರ್ಗದಿಂದ ಅರ್ಹತೆ ಇಲ್ಲದೆ ಹುದ್ದೆ ಪಡೆದುಕೊಂಡಿದ್ದೇನೆ ಎಂದು ಚಂದ್ರೇಗೌಡ ನನ್ನ ತೇಜೋವಧೆ ಮಾಡಿದ್ದಾರೆ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ನಟರಾಜ್ ಹುಳಿಯಾರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಖಾಸಗಿ ದೂರಿನ ವಿಚಾರಣೆ ನಡೆಸಿದ 9ನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ವಿನೋದ್ ಬಾಲನಾಯಕ್ ಅವರು ಸಾಕ್ಷ್ಯಾಧಾರ ಕೊರತೆ ಕಾರಣಗಳಿಂದ ಚಂದ್ರೇಗೌಡ ಅವರನ್ನು ದೋಷಾರೋಪಗಳಿಂದ ಮುಕ್ತಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.