ಸೋಮವಾರ, ಡಿಸೆಂಬರ್ 6, 2021
23 °C
ಬಿಬಿಎಂ‍ಪಿ ವಿಶೇಷ ವಾಹನ ವ್ಯವಸ್ಥೆ ಮಾಡಿದ ‘ಕೇರ್ ಇಂಡಿಯಾ’

ಬೆಂಗಳೂರು | ಮನೆ-ಮನೆಗೆ ತೆರಳಿ ಕೋವಿಡ್ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮನೆ-ಮನೆಗೆ, ಬೀದಿ ಬೀದಿಗಳಿಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿಯು ‘ಕೇರ್ ಇಂಡಿಯಾ’ ಸಹಯೋಗದಲ್ಲಿ 80 ದ್ವಿಚಕ್ರ ವಾಹನ ಹಾಗೂ 16 ಕಾರುಗಳನ್ನು ಬಳಸಲಿದೆ.

ಪ್ರತಿ ವಲಯಕ್ಕೆ 8 ದ್ವಿಚಕ್ರ ವಾಹನಗಳು ಹಾಗೂ 2 ಕಾರುಗಳನ್ನು ಬಿಬಿಎಂಪಿ ಒದಗಿಸಲಿದೆ. ಬ್ಲಾಕ್ ಮತ್ತು ಬೀದಿ ಹಂತದಲ್ಲಿ ಕೋವಿಡ್‌ ಲಸಿಕೆ ನೀಡಲು ‘ಕೇರ್ ಇಂಡಿಯಾ’ ಸ್ವಯಂಸೇವಕರು ಬಿಬಿಎಂಪಿ ಸಿಬ್ಬಂದಿಗೆ ನೆರವಾಗಲಿದ್ದಾರೆ. ಈ ಲಸಿಕೆ ವಾಹನಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಚಾಲನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಲಸಿಕೆ ಪಡೆಯಲು ಅರ್ಹರಾದ ಶೇ 88 ರಷ್ಟು ಮಂದಿ ಮೊದಲ ಡೋಸ್‌ ಹಾಗೂ ಶೇ 62 ರಷ್ಟು  ಮಂದಿ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಎರಡನೇ ಡೋಸ್ ಪಡೆಯದವರ ಪಟ್ಟಿಯನ್ನು ಕೋವಿನ್ ಪೋರ್ಟಲ್ ನಿಂದ ಪಡೆದು ಅವರಿಗೆ ಕರೆ ಮಾಡಿ ತಿಳಿವಳಿಕೆ ನೀಡಲಾಗುತ್ತಿದೆ. 

ವಾರ್ಡ್ ವಾರು ಆರೋಗ್ಯ ತಂಡ: ಆರೋಗ್ಯ ವಿಭಾಗದ ಸಿಬ್ಬಂದಿಯ ತಂಡವು ಮನೆ-ಮನೆಗೆ ಭೇಟಿ ನೀಡಿ 18 ವರ್ಷ ಮೇಲಿನವರು ಲಸಿಕೆ ಪಡೆದಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುತ್ತಿದೆ. 70 ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ 35 ಸಾವಿರ ಮಂದಿಗೆ ತಂಡವು ಲಸಿಕೆ ನೀಡಿದೆ.   

ವಿಶೇಷ ಆಯುಕ್ತ (ಆರೋಗ್ಯ) ಡಾ.ತ್ರಿಲೋಕಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಮತ್ತಿತರರು ಉಪಸ್ಥಿತರಿದ್ದರು.
 

ಅಂಕಿ ಅಂಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ ನೀಡಿರುವ ಕೋವಿಡ್‌ ಲಸಿಕೆಯ ಒಟ್ಟು ಡೋಸ್‌ಗಳು: 1.37 ಕೋಟಿ ಡೋಸ್

ಕೋವಿಡ್‌ ಲಸಿಕೆಯ ಮೊದಲ ಡೋಸ್ ಪಡೆದವರು: 80,57,563

ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದವರು: 56,41,455

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು