ಬೆಂಗಳೂರು: ದೊಡ್ಡ ತೇಗೂರು ಬಳಿ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿಯನ್ನು ಎಲೆಕ್ರ್ಟಾನಿಕ್ ಸಿಟಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಾಗೇಪಲ್ಲಿಯ ಶಾರದಾ(35) ಕೊಲೆಯಾದ ಮಹಿಳೆ.

ಕೃತ್ಯ ಎಸಗಿದ ಆರೋಪದ ಅಡಿ ಶಾರದಾ ಅವರ ಪತಿ, ಆಂಧ್ರಪ್ರದೇಶದ ಕೃಷ್ಣಪ್ಪ (43) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಶಾರದಾ ಮನೆ ಕೆಲಸ ಮಾಡುತ್ತಿದ್ದರೆ, ಕೃಷ್ಣಪ್ಪ ಕೂಲಿ ಕಾರ್ಮಿಕನಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೃಷ್ಣಪ್ಪ ಪ್ರತಿನಿತ್ಯ ಮದ್ಯಪಾನ ಮಾಡಿ ಪತ್ನಿಯ ಜೊತೆಗೆ ಜಗಳ ಮಾಡುತ್ತಿದ್ದ. ಕೌಟುಂಬಿಕ ಕಲಹದಿಂದ ಇತ್ತೀಚೆಗೆ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪುತ್ರ ಕೃಷ್ಣಪ್ಪನ ಜತೆಗೆ ನೆಲಸಿದ್ದರೆ, ಪುತ್ರಿ ಶಾರದಾ ಅವರೊಂದಿಗೆ ಇದ್ದಳು ಎಂದು ಪೊಲೀಸರು ಹೇಳಿದರು.

‘ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು ಎಂದು ಪತಿ ನಿತ್ಯವೂ ಗಲಾಟೆ ಮಾಡುತ್ತಿದ್ದ. ನಗರದ ದೊಡ್ಡ ತೇಗೂರು ಬಳಿಯ ಪ್ರಗತಿ ನಗರದಲ್ಲಿ ಶಾರದಾ ಅವರು ಶುಕ್ರವಾರ ರಾತ್ರಿ ನಡೆದುಕೊಂಡು ಹೋಗುತ್ತಿದ್ದರು. ಆಗ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದ’ ಎಂದು ಪೊಲೀಸರು ತಿಳಿಸಿದರು.

‘ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ ಆರೋಪಿ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ. ಕೃತ್ಯ ಎಸಗಿದ ಬಳಿಕ ಪರಾರಿ ಆಗಲು ಯತ್ನಿಸಿದ ಆತನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಶುಕ್ರವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಸಹಾಯವಾಣಿಗೆ ಕರೆ ಬಂದಿತ್ತು. ಅದನ್ನು ಆಧರಿಸಿ ಸ್ಥಳಕ್ಕೆ ತೆರಳಿದಾಗ ಕೃತ್ಯ ನಡೆದಿದ್ದು ಗೊತ್ತಾಯಿತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.