ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಸಹಪಾಠಿಗಳ ಲೈಂಗಿಕ ಕಿರುಕುಳ: ಗೃಹಿಣಿ ಆತ್ಮಹತ್ಯೆ

Published : 2 ಆಗಸ್ಟ್ 2024, 23:45 IST
Last Updated : 2 ಆಗಸ್ಟ್ 2024, 23:45 IST
ಫಾಲೋ ಮಾಡಿ
Comments

ಬೆಂಗಳೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡೇದಹಳ್ಳಿ ನಿವಾಸಿ ಮಮತಾ (31) ಆತ್ಮಹತ್ಯೆ ಮಾಡಿಕೊಂಡವರು.

ಸಿಡೇದಹಳ್ಳಿಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು, ಜೆ.ಪಿ.ನಗರ ನಿವಾಸಿ, ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. 

‘ವಿವಾಹಕ್ಕೂ ಮುನ್ನ ಜೆ.ಪಿ.ನಗರದಲ್ಲಿ ವಾಸವಾಗಿದ್ದ ಮಮತಾಗೆ ಆರೋಪಿಗಳು ಪ್ರೌಢಶಾಲಾ ಹಂತದಲ್ಲಿ ಸಹಪಾಠಿಗಳಾಗಿದ್ದರು. ನಂತರ, ಮಮತಾ ಅವರು ಲೋಕೇಶ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಆರು ವರ್ಷದ ಗಂಡು ಮಗು ಇದ್ದು, ಸಿಡೇದಹಳ್ಳಿಯಲ್ಲಿ ವಾಸವಿದ್ದರು. ಲೋಕೇಶ್ ಫುಡ್ ಡೆಲಿವರಿ  ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಬುಧವಾರ ಸಂಜೆ ಪತಿ ಲೋಕೇಶ್, ಹಲವು ಬಾರಿ ಕರೆ ಮಾಡಿದ್ದರೂ ಪತ್ನಿ ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಪಕ್ಕದ ಮನೆಯವರಿಗೆ ಲೋಕೇಶ್ ಕರೆ ಮಾಡಿ ತಿಳಿಸಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಮಮತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.

ಮರಣಪತ್ರ ಪತ್ತೆ: ಮಮತಾ ಅವರು ಬರೆದಿದ್ದಾರೆ ಎನ್ನಲಾದ ಮರಣ ಪತ್ರ ಸಿಕ್ಕಿದೆ ಎಂದು ಪೊಲೀಸರು ಹೇಳಿದರು.

‘ಅಶೋಕ್‌ ಹಾಗೂ ಗಣೇಶ್‌ ಅವರು ಪ್ರೌಢಶಾಲೆಯಲ್ಲಿ ಸಹಪಾಠಿಗಳು. ಅವರ ಲೈಂಗಿಕ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಮರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.  

‘ರಾತ್ರಿ ವೇಳೆಯಲ್ಲಿ ಮಮತಾ ಅವರಿಗೆ ಆರೋಪಿಗಳು ವಾಟ್ಸ್‌ ಆ್ಯಪ್‌ನಲ್ಲಿ ಸಂದೇಶ ಕಳುಹಿಸುತ್ತಿದ್ದರು. ಹೊರಗಡೆ ಹೋಗೋಣ, ಟ್ರಿಪ್‌ಗೆ ಹೋಗೋಣ ಎಂದು ಕರೆಯುತ್ತಿದ್ದರು. ಅಲ್ಲದೇ ಆಕೆಗೆ ಅಶ್ಲೀಲ ಸಂದೇಶ ಕಳಿಸುವುದಲ್ಲದೇ ತಮ್ಮೊಂದಿಗೆ ದೈಹಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದರು. ಈ ವಿಚಾರ ಆಕೆಯ ಪತಿಗೂ ಗೊತ್ತಾಗಿ ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದರು. ದೂರು ನೀಡುವುದಾಗಿ ಎಚ್ಚರಿಸಿದ್ದರು. ಆದರೂ ಲೈಂಗಿಕ ಕಿರುಕುಳ ಮುಂದುವರೆಸಿದ್ದರು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT