ಬೆಂಗಳೂರು: ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಆರೋಪಿಯನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ಮಡಕಶಿರಾ ಮೂಲದ ಆನಂದ್ (33) ಎಂಬಾತನನ್ನು ಬಂಧಿಸಿ, ₹16 ಲಕ್ಷ ಮೌಲ್ಯದ 36 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಮಂಚೇನಹಳ್ಳಿಯ ವೃಕ್ಷೋದ್ಯಾನದ ಪ್ರವೇಶ ದ್ವಾರದ ಬಳಿ ನಿಲ್ಲಿಸಿದ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ, ಆರೋಪಿಯನ್ನು ಪತ್ತೆಹಚ್ಚಿ, ಮಾರತ್ತಹಳ್ಳಿಯ ಶ್ರೀರಾಮ ದೇವಸ್ಥಾನದ ಬಳಿ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದಿದ್ದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಳವು ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕಂಪನಿಯೊಂದರ ಪಕ್ಕದ ರಸ್ತೆಯ ಖಾಲಿ ಜಾಗದಲ್ಲಿ ಹಾಗೂ ಚನ್ನರಾಯಪಟ್ಟಣ ಕೈಗಾರಿಕಾ ಪ್ರದೇಶದ ಅಕ್ಕಪಕ್ಕದ ರಸ್ತೆಯ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಕದ್ದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 17 ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆಯಾಗಿದ್ದು, ಉಳಿದ 19 ವಾಹನಗಳ ವಾರಸುದಾರರ ಪತ್ತೆ ಕಾರ್ಯ ಮುಂದುವರಿದಿದೆ.

ಕಳ್ಳತನಕ್ಕೆ ಸಂಬಂಧಿಸಿದಂತೆ ಆನಂದ್ ವಿರುದ್ಧ ಈಗಾಗಲೇ 18 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಸಾರ್ವಜನಿಕ ಸ್ಥಳಗಳು, ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ. ಕದ್ದ ವಾಹನಗಳನ್ನು ತನ್ನ ಗ್ರಾಮದ ಸುತ್ತಮುತ್ತಲ ಹಳ್ಳಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು, ಮಸ್ತಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.