ಬೆಂಗಳೂರು: ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ಕೆಎಸ್ಎಂಡಿಎಂಸಿಎಲ್) ಕಬ್ಬನ್ ಉದ್ಯಾನದಲ್ಲಿ ಆಯೋಜಿಸಿರುವ ಮಾವು ಮತ್ತು ಹಲಸು ಮೇಳಕ್ಕೆ ನಿಗಮದ ಅಧ್ಯಕ್ಷ ಡಾ.ಬಿ.ಸಿ. ಮುದ್ದುಗಂಗಾಧರ್ ಅವರು ಶುಕ್ರವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ರೈತರು ನೇರವಾಗಿ ಗ್ರಾಹಕರಿಗೆ ಮಾವು ಹಾಗೂ ಹಲಸಿನ ಹಣ್ಣುಗಳನ್ನು ಮಾರಾಟ ಮಾಡಲು ಮೇಳದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೇ 17ರವರೆಗೆ ಈ ಮೇಳ ನಡೆಯಲಿದೆ’ ಎಂದರು.

‘18ಕ್ಕೂ ಹೆಚ್ಚು ಮಾವಿನ ತಳಿಗಳು ಮತ್ತು ವಿವಿಧ ಹಲಸಿನ ತಳಿಗಳು ಮೇಳದಲ್ಲಿ ಲಭ್ಯ ಇವೆ. ರೈತರು ಮತ್ತು ಗ್ರಾಹಕರನ್ನು ಒಳಗೊಂಡ ಸಮಿತಿಯುಹಣ್ಣಿನ ದರಗಳನ್ನು ನಿಗದಿಪಡಿಸಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗು ವುದಿಲ್ಲ’ ಎಂದು ತಿಳಿಸಿದರು.

‘ಮಾವು ಪ್ರಿಯರಿಗೆ ಹೊರೆಯಾಗ ಮೇ 17ರವರೆಗೆ ಮತ್ತು ರೈತರಿಗೆ ನಷ್ಟವಾಗದಂತೆ ಬೆಲೆ ನಿಗದಿ ಮಾಡ ಲಾಗಿದೆ. ಆ ಬೆಲೆಗೆ ಮಾತ್ರ ಮಾರಾಟ ಮಾಡಬೇಕು. ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಹಕರಿಗೆ ಉತ್ತಮ ಬೆಲೆಗೆ ಮಾವಿನ ಹಣ್ಣು ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ ಗ್ರಾಹಕರು ಮತ್ತು ರೈತರಿಗೆ ನೆರವಾಗುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ 1.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಪ್ರತಿವರ್ಷ ಸರಾಸರಿ 12ರಿಂದ 14 ಲಕ್ಷ ಟನ್ಗಳಷ್ಟು ಇಳುವರಿ ನಿರೀಕ್ಷಿಸ ಲಾಗುತ್ತಿತ್ತು. ಆದರೆ, ಈ ಸಾಲಿನಲ್ಲಿ ಹವಾಮಾನ ವೈಪರಿತ್ಯದಿಂದ ಮಾವು ಬೆಳೆಯ ಉತ್ಪಾದನೆಯಲ್ಲಿ ಶೇ 30ರಷ್ಟು ಫಸಲು ಮಾತ್ರ ಲಭ್ಯವಾಗಿದೆ. ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಯ ಲಾಗುತ್ತದೆ’ ಎಂದರು.

‘ಮಾವಿನ ಹಣ್ಣನ್ನು ನೈಸರ್ಗಿಕವಾಗಿ ಮಾಗಿಸಲಾಗುತ್ತದೆ. ರಾಸಾಯನಿಕ ಮುಕ್ತ ಮಾವಿನ ಹಣ್ಣನ್ನು ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮೇಳವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತಿದೆ. ಮಾವು, ಹಲಸು ಹಣ್ಣುಗಳ ಬೆಳೆಗಾರರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ, ಬೆಳೆಗಾರರಿಗೆ ಯೋಗ್ಯ ಬೆಲೆ ಹಾಗೂ ಗ್ರಾಹಕರಿಗೆ ರುಚಿಯಾದ ಉತ್ಕೃಷ್ಟ ಗುಣಮಟ್ಟದ ತಾಜಾ ಹಣ್ಣುಗಳು ಸಿಗುವಂತೆ ಮಾಡುವುದು ಈ ಮೇಳದ ಉದ್ದೇಶವಾಗಿದೆ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವೇದಮೂರ್ತಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-799181640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.