ಸೋಮವಾರ, ಜೂನ್ 14, 2021
20 °C

ವಿಪತ್ತು ನಿರ್ವಹಣಾ ಕಾಯ್ದೆಯಡಿ 16 ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಜಾರಿ ವೇಳೆ ನಿಯಮ ಉಲ್ಲಂಘಿಸಿದ್ದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ 16 ಎಫ್‌ಐಆರ್ ದಾಖಲಾಗಿವೆ.

‘ಕರ್ಫ್ಯೂ ಜಾರಿ ಸಂದರ್ಭದಲ್ಲೇ  ಕೆಲವರು ನಿಯಮ ಉಲ್ಲಂಘಿಸಿದ್ದಾರೆ. ಅಂಥವರ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 16 ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

886 ವಾಹನ ಜಪ್ತಿ: ಶನಿವಾರವಷ್ಟೇ ನಿಯಮ ಉಲ್ಲಂಘಿಸಿದ್ದಕ್ಕಾಗಿ 1,149 ವಾಹನಗಳನ್ನು ಜಪ್ತಿ ಮಾಡಿದ್ದ ಪೊಲೀಸರು, ಭಾನುವಾರವೂ 886 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

‘ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದವರನ್ನು ತಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು