ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗೆ ಬೆದರಿಕೆ ಹಾಕಿರುವ ಆರೋಪದಡಿ ಕೃಪಲಾನಿ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಈ ಹಿಂದೆ ಕಳ್ಳ ಸಾಗಣೆ ಪ್ರಕರಣದಲ್ಲಿ ಕೃಪಲಾನಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿ ಆಗಿರುವ ಆಂಥೋನಿ ದೂರು ದಾಖಲಿಸಿದ್ದಾರೆ. ಈ ಹಿಂದೆ ಕಳ್ಳ ಸಾಗಣೆ ಪ್ರಕರಣದಲ್ಲಿ ಕೃಪಲಾನಿ ಸಿಲುಕಿಕೊಂಡಿದ್ದರು. ಈ ಸಂಬಂಧ ಕೃಪಲಾನಿಗೆ ಅಧಿಕಾರಿ ಆಂಥೋನಿ ₹8.50 ಲಕ್ಷ ದಂಡ ವಿಧಿಸಿದ್ದರು.

ದಂಡ ವಿಧಿಸಿದ್ದ ಅಧಿಕಾರಿ ವಿರುದ್ಧ ಸೇಡು ತೀರಿಸಿಕೊಳ್ಳಲು ಕರೆ ಮಾಡಿ ಬೆದರಿಕೆ ಹಾಕಿರುವ ಆರೋಪ ಇದೆ ಎಂದು ಪೊಲೀಸರು ಹೇಳಿದರು.

ಹೆಂಡತಿ ಮಕ್ಕಳನ್ನು ಬಿಡುವುದಿಲ್ಲ: ‘ಆರೋಪಿ ಕವರ್ನಲ್ಲಿ ಎಂಟು ಜಿ.ಬಿಯ ಪೆನ್ಡ್ರೈವ್ವೊಂದನ್ನು ಮನೆಗೆ ಕಳುಹಿಸಿದ್ದಾನೆ. ಅದನ್ನು ಲ್ಯಾಪ್ಟಾಪ್ನಲ್ಲಿ ಹಾಕಿ ಕೇಳಿಸಿಕೊಂಡಾಗ, ಬೆದರಿಕೆ ಹಾಕಿರುವುದು ಗೊತ್ತಾಯಿತು. ನನ್ನ ಕುಟುಂಬವನ್ನು ಜೀವಂತವಾಗಿ ಬಿಡುವುದಿಲ್ಲ. ಹೆಂಡತಿ ಮಕ್ಕಳನ್ನೂ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಾನು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದಾರೆ. ಕೃಪಲಾನಿಯಿಂದ ಭಯವಿದ್ದು, ಆತನ ವಿರುದ್ಧ ಕ್ರಮ ತೆಗೆದುಕೊಳ್ಳಿ’ ಎಂದು ದೂರಿನಲ್ಲಿ ಆಂಥೋನಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-4-93677822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.