ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಹಣ ವರ್ಗಾವಣೆ ಮಾಡಿಸಿಕೊಂಡು ವೃದ್ಧರೊಬ್ಬರಿಗೆ ₹1.58 ಕೋಟಿ ವಂಚಿಸಲಾಗಿದ್ದು, ಈ ಸಂಬಂಧ ವೈಟ್ಫೀಲ್ಡ್ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಠಾಣಾ ವ್ಯಾಪ್ತಿಯಲ್ಲಿ ನೆಲಸಿರುವ 72 ವರ್ಷದ ವೃದ್ಧರೊಬ್ಬರು ನೀಡಿರುವ ದೂರಿನ ಮೇಲೆ ಪ್ರಿಯಾಂಕಾ ಎಂಬುವವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಬಿಎನ್ಎಸ್ನ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ದೂರುದಾರರ ವಾಟ್ಸ್ಆ್ಯಪ್ ಸಂಖ್ಯೆಯನ್ನು ‘ಎಸಿಎಂಇ ವಿಐಪಿ–58’ ಹೆಸರಿನ ಗ್ರೂಪ್ಗೆ ಪ್ರಿಯಾಂಕಾ ಸೇರ್ಪಡೆ ಮಾಡಿದ್ದರು. ಅದಾದ ಕೆಲವು ದಿನಗಳ ಬಳಿಕ ದೂರುದಾರರನ್ನು ಸೈಬರ್ ವಂಚಕರು ಸಂಪರ್ಕಿಸಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಲಭಿಸಲಿದೆ ಎಂಬುದಾಗಿ ನಂಬಿಸಿದ್ದರು. ಅಲ್ಲದೇ ಪ್ಲೇ ಸ್ಟೋರ್ನಿಂದ ‘ಎಸಿಎಂಇ’ ಹೆಸರಿನ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆಯೂ ಮನವೊಲಿಸಿದ್ದರು. ವಂಚಕರ ಸೂಚನೆಯಂತೆ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದ ದೂರುದಾರ, ಆರಂಭದಲ್ಲಿ₹50 ಸಾವಿರ ಹೂಡಿಕೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ಹೇಳಿದ್ದರು. ವಂಚಕರ ಮಾತು ನಂಬಿದ್ದ ದೂರುದಾರ, ತಮ್ಮ ಎರಡು ಬ್ಯಾಂಕ್ ಖಾತೆಗಳಿಂದ ಅಪರಿಚಿತರು ಕಳುಹಿಸಿದ್ದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ₹1.58 ಕೋಟಿ ವರ್ಗಾವಣೆ ಮಾಡಿದ್ದರು’ ಎಂದು ಸೈಬರ್ ಠಾಣೆಯ ಪೊಲೀಸರು ಹೇಳಿದರು.

‘ಕೆಲವು ತಿಂಗಳು ಕಳೆದ ಮೇಲೆ ಹೂಡಿಕೆ ಮಾಡಿದ್ದ ಹಣ ಡ್ರಾ ಮಾಡಿಕೊಳ್ಳಲು ದೂರುದಾರರು ಪ್ರಯತ್ನಿಸಿದ್ದರು. ಹಣ ಡ್ರಾ ಮಾಡಲು ಇನ್ನೂ ಹೆಚ್ಚಿನ ಹಣವನ್ನು ವರ್ಗಾವಣೆ ಮಾಡುವಂತೆ ಸೂಚಿಸಿದ್ದರು. ಆಗ ಸೈಬರ್ ವಂಚನೆ ನಡೆದಿರುವುದು ಗೊತ್ತಾಗಿ ದೂರು ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-1370089451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.