ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅಡುಗೆ ಅನಿಲ ಸೋರಿಕೆ, ಸ್ಫೋಟ: ಐವರಿಗೆ ಗಾಯ

Published 9 ಜುಲೈ 2024, 16:30 IST
Last Updated 9 ಜುಲೈ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರನಗರದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟದಿಂದ ಐವರು ಗಾಯಗೊಂಡಿದ್ದಾರೆ.

ಉತ್ತರಪ್ರದೇಶದ ಕಾರ್ಮಿಕರಾದ ರಾಕೇಶ್(33), ಕೃಷ್ಣ (24), ಹರಿರಾಮ್ (28), ರಾಮ್‌ಧನ್ (28) ಮತ್ತು ಅಶೋಕ್(28) ಗಾಯಗೊಂಡವರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಎಲ್ಲರೂ ನಿರ್ಮಾಣ ಹಂತದ ಮನೆಗಳಿಗೆ ಪಿಒಪಿ ಸೀಲಿಂಗ್ ಹಾಕುವ ಕೆಲಸ ಮಾಡಿಕೊಂಡಿದ್ದರು. ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಅಡುಗೆ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT