ಬೆಂಗಳೂರು: ನಗರದಲ್ಲಿ ರಸ್ತೆಗೆ ಇಳಿಯುತ್ತಿರುವ ಹೊಸ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳೂ ಅಷ್ಟೇ ವೇಗದಲ್ಲಿ ಏರಿಕೆ ಆಗುತ್ತಿವೆ. ನಗರದಲ್ಲಿ ನಿತ್ಯ ಅಂದಾಜು 19 ಸಾವಿರ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ದಾಖಲಾಗುತ್ತಿವೆ.

ಬೆಂಗಳೂರಿಗೆ ‘ದಟ್ಟಣೆ ನಗರ’ ಎಂಬ ಅಪಖ್ಯಾತಿ ಇದೆ. ಅದನ್ನು ಹೋಗಲಾಡಿಸಲು ಹಾಗೂ ಸುಗಮ ಸಂಚಾರಕ್ಕಾಗಿ ವಾಹನಗಳ ದಟ್ಟಣೆ ಆಧರಿಸಿ, ಸ್ವಯಂಚಾಲಿತ ಸಿಗ್ನಲ್ ನಿರ್ವಹಣೆ ತಂತ್ರಜ್ಞಾನ ವ್ಯವಸ್ಥೆ ಜಾರಿ ಮಾಡಲಾಗಿದೆ. ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಆಧರಿಸಿ ಸಂಪರ್ಕರಹಿತವಾಗಿ ದಂಡ ವಿಧಿಸುವ ವ್ಯವಸ್ಥೆ ನಗರದಲ್ಲಿ ಜಾರಿಯಲ್ಲಿದೆ.

ಎ.ಐ ಆಧಾರಿತ ಕ್ಯಾಮೆರಾಗಳು ಹೆಲ್ಮೆಟ್ರಹಿತ ಪ್ರಯಾಣ, ಅತಿವೇಗದ ಚಾಲನೆ, ಸಿಗ್ನಲ್ ದಾಟುವುದು, ಅಡ್ಡಾದಿಡ್ಡಿ ವಾಹನ ಚಾಲನೆ, ನಿರ್ಬಂಧಿತ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಖರವಾಗಿ ಪತ್ತೆಹಚ್ಚುತ್ತಿವೆ. ಇದರ ಪರಿಣಾಮ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿ ಆಗುತ್ತಿದ್ದು, ದಂಡ ಸಂಗ್ರಹದ ಮೊತ್ತವೂ ಹೆಚ್ಚಳವಾಗುತ್ತಿದೆ.

ದಂಡದ ಪಾವತಿಯಲ್ಲಿ ರಿಯಾಯಿತಿ ಘೋಷಣೆ ಹಾಗೂ ಪರಿಣಾಮಕಾರಿ ಕ್ರಮ, ತಂತ್ರಜ್ಞಾನ ಅಳವಡಿಕೆಯಿಂದಾಗಿ 2025ರಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳಲ್ಲಿ ₹258.16 ಕೋಟಿ ದಂಡ ಸಂಗ್ರಹವಾಗಿತ್ತು. ಇದು ಕಳೆದ ಒಂದು ದಶಕದಲ್ಲಿಯೇ ಸಂಗ್ರಹವಾದ ಅತ್ಯಧಿಕ ದಂಡದ ಮೊತ್ತ. ಈ ವರ್ಷ ಇದುವರೆಗೂ ₹24.80 ಕೋಟಿ ದಂಡ ಸಂಗ್ರಹವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

‘ಕಳೆದ ವರ್ಷ ನಗರದಲ್ಲಿ ವಿವಿಧಮಾದರಿಯ ಸಂಚಾರ ನಿಯಮ ಉಲ್ಲಂಘನೆಯ 69.89 ಲಕ್ಷ ಪ್ರಕರಣಗಳನ್ನು ದಾಖಲು ಮಾಡಲಾಗಿತ್ತು. ಈ ವರ್ಷ ಮೂರು ತಿಂಗಳಲ್ಲಿಯೇ 14.36 ಲಕ್ಷ ಪ್ರಕರಣಗಳು ದಾಖಲಾಗಿವೆ ಎಂದು ಸಂಚಾರ ವಿಭಾಗದ ಪೊಲೀಸರು ಸಂಗ್ರಹಿಸಿರುವ ಮಾಹಿತಿಯಿಂದ ಗೊತ್ತಾಗಿದೆ. ತಂತ್ರಜ್ಞಾನ ಆಧರಿಸಿ, ಶೇ 88ರಷ್ಟು ಪ್ರಕರಣಗಳು (ಸಂಪರ್ಕರಹಿತ) ದಾಖಲಾಗುತ್ತಿದ್ದರೆ, ಬಾಡಿವೋರ್ನ್ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಾವಳಿ ಹಾಗೂ ಸಿಬ್ಬಂದಿಯ ಕಣ್ಣಿಗೆ ಗೋಚರಿಸಿದಂತೆ (ಸಂಪರ್ಕಸಹಿತ) ಶೇ 12ರಷ್ಟು ಪ್ರಕರಣಗಳು ದಾಖಲಾಗುತ್ತಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ವಾಹನ ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಜಾಗೃತಿ, ತರಬೇತಿ ಹಾಗೂ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡುತ್ತಿದ್ದರೂ ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಕಡಿಮೆಯಾಗಿಲ್ಲ. ಕಚೇರಿಗೆ ಬೇಗನೇ ತಲುಪುವ, ಮನೆಗೆ ವಾಪಸ್ ಬರುವ ಧಾವಂತದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಸಾಮಾನ್ಯವಾಗಿದೆ.

‘ಬೆಳಿಗ್ಗೆ 7ರಿಂದ 11ರ ವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10ರವರೆಗೆ ದಟ್ಟಣೆ ಅವಧಿಯಿದೆ. ಆ ಸಮಯದಲ್ಲಿ ವಾಹನಗಳನ್ನು ತಡೆದು ತಪಾಸಣೆ ಮಾಡುವಂತಿಲ್ಲ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಕಂಡುಬಂದಾಗ ಮಾತ್ರವೇ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸಬೇಕು. ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ಸಿಬ್ಬಂದಿಗೆ ಸೂಚಿಸಲಾಗಿದೆ. ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿರುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿವೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಇದರ ವಿರುದ್ಧ ವಿಶೇಷ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದುವರೆಗೂ ವ್ಹೀಲಿ, ಮದ್ಯಸೇವಿಸಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗುತ್ತಿತ್ತು. ಸದ್ಯ ಪಶ್ಚಿಮ ವಿಭಾಗದ ಎಲ್ಲ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತಿದೆ. ಇತರೆ ವಿಭಾಗಕ್ಕೂ ಈ ನಿಯಮ ವಿಸ್ತರಿಸುವ ಆಲೋಚನೆಯಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.