ಬೆಂಗಳೂರು: ದಲಿತ ನಾಯಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ನಾಯಕರಾದ ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಕೆ.ಎಚ್.ಮುನಿಯಪ್ಪ ಅವರ ಪೈಕಿ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಡಿ.ಕೆ.ಶಿವಕುಮಾರ್ ಅವರು ಜೂನ್ 3 ರಂದು ಲೋಕಭವನದಲ್ಲಿ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಂದು ದಲಿತ ನಾಯಕರೊಬ್ಬರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಂತಾಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಒತ್ತಾಯಿಸಿದರು. ಯಾವುದೇ ಕಾರಣಕ್ಕೂ ದಲಿತ ಸಮುದಾಯಕ್ಕೆ ಅನ್ಯಾಯವಾಗಬಾರದು. ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಆರ್ಪಿಐ ಅಧ್ಯಕ್ಷ ವೆಂಕಟಸ್ವಾಮಿ, ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಡಿ.ಶಿವಶಂಕರ್, ಸುರೇಶ್ ರಾಜ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-90397727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.