ಬೆಂಗಳೂರು: ನಗರದಲ್ಲಿ ಯಾವುದೇ ಸಂಸ್ಥೆಗಳ ಆವರಣದಲ್ಲಿ ಒಣಗಿರುವ, ಅಪಾಯದ ಸ್ಥಿತಿಯಲ್ಲಿರುವ, ಶಿಥಿಲಾವಸ್ಥೆಯಲ್ಲಿರುವ ಮರಗಳು, ರೆಂಬೆಗಳಿದ್ದರೆ ಅನುಮತಿ ಪಡೆದು ತೆರವು ಮಾಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದೆ.

ಜಿಬಿಎ ವ್ಯಾಪ್ತಿಯಲ್ಲಿರುವ ಸರ್ಕಾರಿ, ಸರ್ಕಾರೇತರ ಸಂಘ ಸಂಸ್ಥೆಗಳು, ಕಾರ್ಖಾನೆಗಳು, ಕೈಗಾರಿಕೆಗಳು, ಖಾಸಗಿ ಕಂಪನಿಗಳ ಆವರಣದಲ್ಲಿರುವ ಇಂಥ ಮರ, ರೆಂಬೆ ಕೊಂಬೆಗಳ ಮೇಲ್ವಿಚಾರಣೆಯು ಆಯಾ ಸಂಸ್ಥೆಗಳದ್ದೇ ಆಗಿರುತ್ತದೆ. ಯಾವುದೇ ಪ್ರಾಣ ಹಾನಿ, ಆಸ್ತಿ–ಪಾಸ್ತಿಗಳ ಹಾನಿಯಾಗುವುದನ್ನು ತಡೆಗಟ್ಟಲು ಅಪಾಯದ ಸ್ಥಿತಿಯಲ್ಲಿರುವ ಹಾಗೂ ಒಣಗಿರುವ ಮರ, ರೆಂಬೆ–ಕೊಂಬೆಗಳ ತೆರವಿಗೆ ಅನುಮತಿ ಕೋರಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆ ವ್ಯಾಪ್ತಿಯ ಅರಣ್ಯ ಘಟಕದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಳಿಗೆ ನಮೂನೆ(1)ರಂತೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಮಾಹಿತಿಗೆ ಮೊ.ಸಂ. 9480683047, 9945038877, 9900245013 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-4-1415496894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.