ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್ಇ) ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ, ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವಿದ್ದು, ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಹಾಗೂ ಡಿಸಿಆರ್ಇ ಡಿಜಿಪಿಗೆ ಎರಡು ಪ್ರತ್ಯೇಕ ದೂರುಗಳು ಸಲ್ಲಿಕೆ ಆಗಿವೆ.

ಡಿಸಿಆರ್ಇ ಡಿವೈಎಸ್ಪಿ ಮಹೇಶ್ವರಗೌಡ ಹಾಗೂ ಕೇಂದ್ರ ಕಚೇರಿಯ ಎಸ್.ಪಿ ಕರಿಬಸನಗೌಡ ಅವರ ವಿರುದ್ಧ ಪಶ್ಚಿಮ ವಿಭಾಗದ ಇನ್ಸ್ಪೆಕ್ಟರ್ ಟಿ.ಆರ್.ಶ್ರೀನಿವಾಸ್ ದೂರು ಸಲ್ಲಿಸಿದ್ದಾರೆ. ಶ್ರೀನಿವಾಸ್ ಅವರು ಪತ್ರದಲ್ಲಿ 18 ಅಂಶಗಳನ್ನು ಉಲ್ಲೇಖಿಸಿದ್ದಾರೆ. ಅಲ್ಲದೇ, ವಿಡಿಯೊ ಹೇಳಿಕೆಯನ್ನೂ ಬಿಡುಗಡೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿಗಳು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ, ಡಿಸಿಆರ್ಇ ಎಸ್ಪಿ ಎಸ್.ಎಸ್.ಕಾಶಿ ಸಹ ದೂರು ನೀಡಿದ್ದಾರೆ.

ಐಪಿಎಸ್ ಅಧಿಕಾರಿಗಳ ದೌರ್ಜನ್ಯ: ಐಪಿಎಸ್ ಅಧಿಕಾರಿಗಳು ನೀಡುತ್ತಿರುವ ದೌರ್ಜನ್ಯವನ್ನು ಎಳೆ ಎಳೆಯಾಗಿ ಬಹಿರಂಗಪಡಿಸಲು ಅನುಮತಿ ನೀಡುವಂತೆ ಸಲೀಂ ಅವರಿಗೆ ಸಲ್ಲಿಸಿರುವ ಪತ್ರದಲ್ಲಿ ಕಾಶಿ ಅವರು ಕೋರಿದ್ದಾರೆ.

‘ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು, ತಮ್ಮ ಅಧಿಕಾರ ಬಲದಿಂದ ಕೆಳಹಂತದ ಅಧಿಕಾರಿಗಳು, ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ, ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ’ ಎಂದು ದೂರಿನಲ್ಲಿ ಕಾಶಿ ಉಲ್ಲೇಖಿಸಿದ್ದಾರೆ.

‘ಕರ್ನಾಟಕ ಕೇಡರ್ನ ಅಧಿಕಾರಿಗಳು, ಕನ್ನಡಿಗ ಅಧಿಕಾರಿ ಗಳನ್ನು ಹತ್ತಿಕ್ಕುವ ಉದ್ದೇಶದಿಂದ ದರ್ಪ ತೋರಿಸುತ್ತಾ ಅಧಿಕಾರದ ದುರುಪಯೋಗ ಪಡಿಸಿಕೊಳ್ಳುತ್ತಿ ದ್ದಾರೆ’ಎಂದು ಆಪಾದಿಸಿದ್ದಾರೆ. ‘ಈ ಹಿಂದೆಯೂ ತಮ್ಮ ಬಳಿ ಈ ವಿಚಾರ ಪ್ರಸ್ತಾಪಿಸಿದಾಗ ಸಮಸ್ಯೆಗಳ ಪೈಕಿ ಶೇ 20ರಷ್ಟು ಬಗೆಹರಿಸಿದ್ದೀರಿ. ಉಳಿದ ಶೇ 80ರಷ್ಟು ಸಮಸ್ಯೆಗಳು ಬಗೆಹರಿದಿಲ್ಲ. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಸಮ್ಮುಖದಲ್ಲಿ ಈ ಕುರಿತು ಮುಕ್ತವಾಗಿ ಮಾತನಾಡಲು ಅವಕಾಶ ಕಲ್ಪಿಸಿ. ಕೇವಲ 30 ನಿಮಿಷಗಳಲ್ಲಿ ಎಲ್ಲ ವಿಚಾರಗಳನ್ನೂ ತಿಳಿಸುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-703467688

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.