ಬೆಂಗಳೂರು: ಬೆಂಗಳೂರು ನಗರದ ಮತದಾನ ಪ್ರಮಾಣ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ನವನಿರ್ಮಾಣ ಪಕ್ಷ ಆಗ್ರಹಿಸಿದೆ.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ‘2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರವು ಶೇ 100ರಷ್ಟು ಮತದಾನ ಸಾಧಿಸಲು, ಮತದಾನ ದಿನದಂದು ಎಲ್ಲ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡಿತ್ತು. ಹಲವಾರು ಜಾಗೃತಿ ಅಭಿಯಾನಗಳು ನಡೆಸಿದರೂ ಶೇ 52 ರಷ್ಟು ಮತದಾನ ಪ್ರಮಾಣ ಮಾತ್ರವೇ ಆಗಿತ್ತು. ಆದ್ದರಿಂದ, ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರುಗಳನ್ನು ತೆಗೆದು ಹಾಕಬೇಕು. ಅರ್ಹ ಮತದಾರರ ಹೆಸರುಗಳನ್ನು ಸೇರಿಸಬೇಕು. ಒಂದಕ್ಕಿಂತ ಹೆಚ್ಚು ಮತದಾನದ ಚೀಟಿಗಳಿರದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದೆ.

‘ಮತದಾರರ ಚೀಟಿಯಲ್ಲಿ ಅರ್ಹರಲ್ಲದ, ಪುನರಾವರ್ತಿತ ಹೆಸರಗಳನ್ನು ತೆಗೆದು ಹಾಕಬೇಕು. ಎಲ್ಲ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವ ಮೂಲಕ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು. ಒಂದೇ ಸಮುದಾಯದ ಮತದಾರರನ್ನು ಒಂದೇ ಬೂತ್ನಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಬೇಕು. ಮತದಾರರ ನೋಂದಣಿ, ವರ್ಗಾವಣೆ ಮತ್ತು ನವೀಕರಣ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು’ ಎಂದು ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.