ಬೆಂಗಳೂರು: ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ ಬದಿಯಲ್ಲಿ ಕಂಟೈನರ್ ವಾಹನವನ್ನು ನಿಲ್ಲಿಸಿ ಚಾಲಕ ಕೆಳಗೆ ಇಳಿದಾಗ ವೇಗವಾಗಿ ಬಂದ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದ ಶ್ರೀಧರ್(34) ಮೃತಪಟ್ಟವರು.

ಪ್ರಕರಣ ದಾಖಲಿಸಿಕೊಂಡಿರುವ ದೇವನಹಳ್ಳಿ ಸಂಚಾರ ಪೊಲೀಸರು ಅಪರಿಚಿತ ವಾಹನದ ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಎನ್ಎಚ್-648 ಮುಖ್ಯರಸ್ತೆಯ ಹೊಸಕೋಟೆ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ಸಾಗುವ ನಿಲೇರಿ ಗ್ರಾಮದ ಸೇತುವೆಯ ಬಳಿ ಅಪಘಾತ ಸಂಭವಿಸಿದೆ.

ಕಂಟೈನರ್ ಚಾಲಕ ಶ್ರೀಧರ್ ಅವರು ಬುಧವಾರ ರಾತ್ರಿ 10.50 ಸುಮಾರಿಗೆ ವಾಹನ ನಿಲ್ಲಿಸಿ ಕೆಳಗೆ ಇಳಿದಿದ್ದರು. ಆಗ ಹೊಸಕೋಟೆ ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಅತಿವೇಗವಾಗಿ ಬಂದ ವಾಹನವೊಂದು, ಟಾಟಾ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಂತರ, ಚಾಲಕನ ಮೇಲೆ ಹರಿದ ಪರಿಣಾಮ ಚಾಲಕ ಶ್ರೀಧರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪಘಾತ ಎಸಗಿ ಪರಾರಿ ಆಗಿರುವ ಚಾಲಕನ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.