ಬೆಂಗಳೂರು: ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಕತ್ತು ಸೀಳಿ ಕೊಲೆ ಮಾಡಲಾಗಿದ್ದು, ಸಕ್ಕರೆ ಮಂಡಿ ಸಮೀಪದ ಪಾಳು ಬಿದ್ದ ಮನೆಯಲ್ಲಿ 17 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಶಬೀಲ್ (20) ಎಂಬಾತ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಆತನ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾಗಿರುವ ಬಾಲಕಿ ಹಾಗೂ ಶಬೀಲ್ ನಡುವೆ ನಿಶ್ಚಿತಾರ್ಥವಾಗಿತ್ತು. ಹಬ್ಬದ ನಂತರ ಇಬ್ಬರಿಗೂ ಮದುವೆ ಮಾಡಲು ಕುಟುಂಬದ ಸದಸ್ಯರು ನಿರ್ಧರಿಸಿದ್ದರು. ಇಬ್ಬರೂ ಸಕ್ಕರೆ ಮಂಡಿಯಲ್ಲಿರುವ ಶಬೀಲ್ ಸಂಬಂಧಿಕರ ಒಡೆತನದ ಪಾಳು ಬಿದ್ದ ಮನೆಯಲ್ಲಿ ಭೇಟಿಯಾಗುತ್ತಿದ್ದರು ಎಂದು ತಿಳಿದು ಬಂದಿದೆ.

ಖಾಸಗಿಯಾಗಿ ಮಾತುಕತೆ ನಡೆಸುವ ಉದ್ದೇಶದಿಂದ ಆರೋಪಿಯು ಮಂಗಳವಾರ ಬೆಳಿಗ್ಗೆ 6.30ಕ್ಕೆ ಬಾಲಕಿಯನ್ನು ಪಾಳುಬಿದ್ದ ಮನೆಗೆ ಕರೆದುಕೊಂಡು ಬಂದು, ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಾಲಕಿ ಬಿದ್ದಿರುವುದನ್ನು ಕಂಡು ಸಂಬಂಧಿಕರು ಪೊಲೀಸರಿಗೆ ವಿಷಯ ತಿಳಿಸಿದರು.

ಘಟನಾ ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ, ಡಿ.ಜೆ.ಹಳ್ಳಿ ಠಾಣೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಹಾಗೂ ಸೋಕೋ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿವೆ.

‘ಆರೋಪಿ ಶಬೀಲ್ ಬಂಧಿಸಿದ ನಂತರ ಕೊಲೆಗೆ ಕಾರಣ ತಿಳಿಯಲಿದೆ. ಘಟನೆ ನಡೆದ ಸ್ಥಳ ಶಬೀಲ್ ಕುಟುಂಬಕ್ಕೆ ಸೇರಿದೆ. ಈ ಮನೆಯಲ್ಲಿ ಯಾರೂ ವಾಸ ಇರಲಿಲ್ಲ. ಆಗಾಗ ಇಬ್ಬರೂ ಇಲ್ಲಿ ಬಂದು ಭೇಟಿಯಾಗುತ್ತಿದ್ದರು ಎಂಬ ಮಾಹಿತಿ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.