ಬೆಂಗಳೂರು: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ.

ಸಭೆ ಬಳಿಕ ಮಾತನಾಡಿದ ಸೀಮಾಂತ್ ಕುಮಾರ್ ಸಿಂಗ್, ‘ಲೋಕ ಭವನಕ್ಕೆ ಆಹ್ವಾನಿತರಿಗೆ ಮಾತ್ರ ಪವೇಶ ವಿರಲಿದೆ. ಉಳಿದವರಿಗೆ ಪ್ರವೇಶವಿಲ್ಲ. ಕಾರ್ಯಕ್ರಮಕ್ಕೆ ಪಾಸ್ ನೀಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವಿತರಿಸಿರುವ ಪಾಸ್ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಹೊರ ರಾಜ್ಯದಿಂದಲೂ ಗಣ್ಯರು ಕಾರ್ಯಕ್ರಮಕ್ಕೆ ಬರುತ್ತಿದ್ದು, ಅವರ ಭದ್ರತೆಗೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ’ ಎಂದರು.

‘ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ರೋಡ್ ಶೋ ನಡೆಯುವುದಿಲ್ಲ. ನಗರ ಪೊಲೀಸ್ ಸಿಬ್ಬಂದಿಯೊಂದಿಗೆ ಕೆಎಸ್ಆರ್ಪಿ, ಕ್ಷೀಪ್ರ ಕಾರ್ಯ ಪಡೆಗಳನ್ನು ನಿಯೋಜಿಸಲಾಗಿದೆ. ಡ್ರೋನ್ಗಳು ಮತ್ತು ಸಿ.ಸಿ.ಟಿ.ವಿ ಕ್ಯಾಮೆರಾ ಗಳನ್ನು ಒಳಗೊಂಡ ನಿಗಾವ್ಯವಸ್ಥೆ ಇದೆ’ ಎಂದರು.

ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ ಕೆಲ ಸ್ಥಳಗಳಲ್ಲಿ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಇಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಭದ್ರತಾ ಸಿಬ್ಬಂದಿ ಯನ್ನು ನಿಯೋಜಿಸಲಾಗುತ್ತದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-489740401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.