ಬೆಂಗಳೂರು: ಮಹಿಳಾ ಉದ್ಯೋಗಿಯ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೈದ್ಯರೊಬ್ಬರ ವಿರುದ್ಧ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರಿನ ಮೇಲೆ ಎಚ್ಎಸ್ಆರ್ ಲೇಔಟ್ 7ನೇ ಸೆಕ್ಟರ್ನ ಗಣಪ ಆರ್ಕೇಡ್ನಲ್ಲಿರುವ ಡಾ.ಹೀಲ್ ಆಸ್ಪತ್ರೆ ಮುಖ್ಯಸ್ಥ ಡಾ.ರಾಕೇಶ್ ಜಯಪ್ರಕಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನನ್ವಯ ಆರೋಪಿಗೆ ನೋಟಿಸ್ ನೀಡಲಾಗಿದೆ. ಆದರೆ, ತರಬೇತಿ ನಿಮಿತ್ತ ಬೇರೆ ಕಡೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ನಗರಕ್ಕೆ ಬಂದ ತಕ್ಷಣ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಕೆಲಸದ ಸಂದರ್ಭದಲ್ಲಿ ಮಹಿಳೆ ಧರಿಸಿದ್ದ ಸಮವಸ್ತ್ರದ ಬಗ್ಗೆ ಆರೋಪಿ ಅಸಭ್ಯವಾಗಿ ಮಾತನಾಡಿದ್ದಾರೆ. ಈ ರೀತಿ ಮಾತನಾಡದಂತೆ ಮಹಿಳೆ ಹಲವು ಬಾರಿ ಹೇಳಿದ್ದರು. ಅಲ್ಲದೇ ಆಕೆಗೆ ಕರೆ ಮಾಡಿ ಅನುಚಿತವಾಗಿ ಮಾತನಾಡಿದ್ದಾರೆ ಹಾಗೂ ವಾಟ್ಸ್ಆ್ಯಪ್ ಮೂಲಕ ‘ಮಿಸ್ ಯೂ’ ಎಂಬ ಸಂದೇಶ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಾಗಿ ದಂಪತಿ ನಡುವೆ ಜಗಳವಾಗಿದೆ ಎಂದು ಪೊಲೀಸರು ತಿಳಿಸಿದರು. ಆರೋಪಿ ಕಿರುಕುಳಕ್ಕೆ ಬೇಸತ್ತ ಮಹಿಳೆ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಅಸಭ್ಯವಾಗಿ ವರ್ತಿಸಿ, ಹೆಣ್ಣಿನ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿರುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮಹಿಳೆ ಮನವಿ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.