ಬೆಂಗಳೂರು: ಮಾಲೀಕರು ಸಾಕಿದ್ದ ನಾಯಿ ಮರಿ ಕೊಂದ ಆರೋಪದಡಿ ಮನೆ ಕೆಲಸದಾಕೆಯ ಮೇಲೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪುಷ್ಪಲತಾ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕೆ.ಆರ್. ರಾಶಿಕಾ ಅವರು ನೀಡಿದ ದೂರು ಆಧರಿಸಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 325 ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಗೂಫಿ’ ಹೆಸರಿನ ನಾಯಿಯನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು ಬಿಗಿದು ಕೊಲೆ ಮಾಡಿರುವುದು ಲಿಫ್ಟ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಲಸದಾಕೆಯ ಕೃತ್ಯವನ್ನು ಮನೆ ಮಾಲೀಕರಾದ ರಾಶಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ಧಾರೆ. ಪುಷ್ಪಲತಾ ಅವರ ಕೃತ್ಯಕ್ಕೆ ಪ್ರಾಣಿ ಪ್ರಿಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ದೂರಿನಲ್ಲಿ ಏನಿದೆ?: ‘ಸಾಕು ನಾಯಿ ನೋಡಿಕೊಳ್ಳಲು ಪುಷ್ಪಾಲತಾ ಅವರನ್ನು ನೇಮಿಸಿಕೊಳ್ಳಲಾಗಿತ್ತು. ಅ.31ರಂದು ನಾಯಿಯನ್ನು ವಾಕಿಂಗ್ಗೆ ಕರೆದೊಯ್ದಿದ್ದ ಪುಷ್ಪಲತಾ ಲಿಫ್ಟ್ನೊಳಗೆ ಬರುತ್ತಿದ್ದಂತೆ ನೆಲಕ್ಕೆ ಬಡಿದು, ಬೆಲ್ಟ್ನಿಂದ ಕತ್ತು ಬಿಗಿದು ಸಾಯಿಸಿದ್ದಾರೆ. ಬಳಿಕ ನಾಯಿಯ ಕಳೇಬರವನ್ನು ಎಳೆದು ತಂದು ಇದ್ದಕ್ಕಿದ್ದಂತೆ ಸಾವನ್ನಪ್ಪಿತು ಎಂದು ಆರೋಪಿ ಸುಳ್ಳು ಹೇಳಿದ್ದರು. ಅನುಮಾನಗೊಂಡು ಮಾರನೇ ದಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿದಾಗ ಕೆಲಸದಾಕೆಯ ಕೃತ್ಯ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.