ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಹಾಗೂ ವಿವೇಕನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ವಿದೇಶಿ ಪೆಡ್ಲರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹1.21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಳ್ಳವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ.

ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ನೈಜೀರಿಯಾದ ನದುದಿ(25) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯಿಂದ ₹50.1 ಲಕ್ಷ ಮೌಲ್ಯದ 101 ಗ್ರಾಂ ಕೊಕೇನ್, ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಬೇಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೇಗೂರು ನಿವಾಸಿ ಆಕಾಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ₹48 ಲಕ್ಷ ಮೌಲ್ಯದ 481 ಗ್ರಾಂ ಹೈಡ್ರೊಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ವಿವೇಕನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹21 ಲಕ್ಷ ಮೌಲ್ಯದ 21 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.

ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಆರೋಪಿಗಳು ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್ ಗೆಸ್ಟ್ನಲ್ಲಿ ನೆಲಸಿದ್ದವರಿಗೆ ಡ್ರಗ್ಸ್ ಪೂರೈಸುತ್ತಿದ್ದರು. ವನ್ನಾರ್ಪೇಟೆ ರಸ್ತೆ, ಬೇಗೂರಿನ ಜೆಇಐಎಸ್ ಲೇಔಟ್ ಹಾಗೂ ಕೆ.ಆರ್. ಪುರ ಬಸ್ ತಂಗುದಾಣದ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.