ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿ, ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿ ₹5.50 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನೈಜೀರಿಯಾದ ಡುರೊ ಮಿಶೆಲ್ ಹಾಗೂ ಇಬು ಸಾಮ್ಯುವೆಲ್ ಎಂಬುವರನ್ನು ಬಂಧಿಸಿದ್ದು, ಅವರಿಂದ 1 ಕೆ.ಜಿ 47 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಹಾಗೂ ₹42 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ದೆಹಲಿಯಿಂದ ಬೆಂಗಳೂರಿಗೆ ಎಂಡಿಎಂಎ ಕ್ರಿಸ್ಟಲ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದರು. ಬ್ಯುಸಿನೆಸ್ ವೀಸಾದ ಅಡಿ 2017ರಲ್ಲಿ ಭಾರತಕ್ಕೆ ಬಂದಿದ್ದ ಆರೋಪಿಗಳು, ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲಸಿದ್ದರು. ಆರಂಭದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಆರೋಪಿಗಳು, ತಮಿಳುನಾಡಿನಿಂದ ಬಟ್ಟೆ ಖರೀದಿಸಿ ನೈಜೀರಿಯಾಗೆ ರಫ್ತು ಮಾಡುತ್ತಿದ್ದರು ಎಂದು ಹೇಳಿದರು.

ಬಳಿಕ ಸುಲಭವಾಗಿ ಹಣ ಸಂಪಾದನೆ ಮಾಡಲು ದೆಹಲಿಯಿಂದ ಲಗೇಜ್ಗಳ ಮೂಲಕ ಆರೋಪಿಗಳು ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು. ಬಳಿಕ, ನಗರದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ (ಪಿ.ಜಿ) ಎದುರು ಡ್ರಗ್ಸ್ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಕೆ.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದೇಶಿ ಅಂಚೆ ಕಚೇರಿಗೆ ಥಾಯ್ಲೆಂಡ್ನಿಂದ ಬಂದಿದ್ದ ಪಾರ್ಸೆಲ್ನಲ್ಲಿದ್ದ ₹3 ಕೋಟಿ ಮೌಲ್ಯದ ಮೂರು ಕೆ.ಜಿ. ಹೈಡ್ರೊಗಾಂಜಾ ಜಪ್ತಿ ಮಾಡಲಾಗಿದೆ. ಅಂಚೆ ಕಚೇರಿಗೆ ವಿದೇಶದಿಂದ ಅನುಮಾನಾಸ್ಪದ ಪಾರ್ಸೆಲ್ ಬರುತ್ತಿರುವುದಾಗಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಅಪಾರ ಪ್ರಮಾಣದ ಹೈಡ್ರೊಗಾಂಜಾ ಪತ್ತೆ ಆಗಿದೆ ಎಂದು ಮಾಹಿತಿ ನೀಡಿದರು.

‘ವಿದೇಶಿ ಕಂಪನಿಗಳ ಬಿಸ್ಕತ್, ಚಾಕೊಲೇಟ್ ಪೊಟ್ಟಣಗಳಲ್ಲಿ ಮರೆಮಾಚಿ ಡ್ರಗ್ಸ್ ಅನ್ನು ನಗರದ ವಿದೇಶಿ ಅಂಚೆ ಕಚೇರಿಗೆ ತರಲಾಗುತ್ತಿತ್ತು. ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.

ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ(ಎನ್ಡಿಪಿಎಸ್) ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.