ಬೆಂಗಳೂರು: ಯಲಹಂಕ ಉಪನಗರ, ಆಡುಗೋಡಿ, ಭಾರತಿನಗರ, ಜಾಲಹಳ್ಳಿ ಹಾಗೂ ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ₹5.14 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಳ್ಳುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಜತೆಗೆ, ವಿದೇಶದ ಇಬ್ಬರು ಡ್ರಗ್ ಪೆಡ್ಲರ್ಗಳೂ ಸೇರಿದಂತೆ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಎರಡು ಕೆ.ಜಿ 7 ಗ್ರಾಂ ಎಂಡಿಎಂಎ, 31 ಕೆ.ಜಿ 396 ಗ್ರಾಂ ಗಾಂಜಾ, 220 ಗ್ರಾಂ ಹೈಡ್ರೊಗಾಂಜಾ, 162 ಗ್ರಾಂ ಹೆರಾಯಿನ್ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಡುಗೋಡಿ ಠಾಣೆಯ ಪೊಲೀಸರು, ತಮ್ಮ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಎಲ್.ಆರ್.ನಗರದ ನಿವಾಸಿ ಸಂತೋಷ್ (20), ಕೋರಮಂಗಲದ ರಂಜಿತ್ (23), ಅರುಣ್ (30), ನಾರಾಯಣಪುರದ ಅರ್ಜುನ್ ಜೋಶಿ (22) ಹಾಗೂ ಉತ್ತರ ಪ್ರದೇಶದ ಬಲಜಿತ್ ಸಿಂಗ್ (22) ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ.

ನೈಜೀರಿಯಾ ದೇಶದ ಪ್ರಜೆ ಸೆರೆ: ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದು, ನಗರದಲ್ಲಿ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾದ ಸ್ಯಾಮ್ಯುವೆಲ್ ಇಕ್ಕೆನಾ ಬಂಧಿತ.

ಆರೋಪಿಯಿಂದ ಅಂದಾಜು ₹2 ಕೋಟಿ ಮೌಲ್ಯದ 2 ಕೆ.ಜಿ ಎಂಡಿಎಂಎ ಕ್ರಿಸ್ಟಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2012ರಲ್ಲಿ ಭಾರತಕ್ಕೆ ಬಂದಿದ್ದ ಸ್ಯಾಮ್ಯುವೆಲ್, ಆರಂಭದಲ್ಲಿ ದೆಹಲಿ ಮತ್ತು ಮುಂಬೈನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಕಳೆದ ವರ್ಷ ನಗರಕ್ಕೆ ಬಂದಿದ್ದ ಆರೋಪಿ, ಬನ್ನೇರುಘಟ್ಟ ರಸ್ತೆಯಲ್ಲಿ ಬಟ್ಟೆ ಮಾರಾಟ ಮಾಡುವ ಸೋಗಿನಲ್ಲಿ ಮಾದಕ ಪದಾರ್ಥಗಳ ಮಾರಾಟ ಆರಂಭಿಸಿದ್ದ. ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಹಣ ಗಳಿಸುವ ಉದ್ಧೇಶದಿಂದ ಡ್ರಗ್ಸ್ ವ್ಯಾಪಾರ ಮಾಡುತ್ತಿದ್ದೆ ಎಂಬುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದರು.

11 ಆರೋಪಿಗಳ ವಿರುದ್ಧ ಮಾದಕ ವಸ್ತು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.