ಬೆಂಗಳೂರು: ಹೆಬ್ಬಗೋಡಿ, ಯಲಹಂಕ, ಮೈಕೊಲೇಔಟ್, ಪರಪ್ಪನ ಅಗ್ರಹಾರ, ಬಾಗಲೂರು ಹಾಗೂ ಬಾಣಸವಾಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಂದಾಜು ₹27.42 ಕೋಟಿ ಮೌಲ್ಯದ ವಿವಿಧ ಮಾದರಿಯ ಸಿಂಥೆಟಿಕ್ ಹಾಗೂ ನೈಸರ್ಗಿಕ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ವಿದೇಶದ ಒಬ್ಬ, ಹೊರ ರಾಜ್ಯದ ನಾಲ್ವರು ಹಾಗೂ ಬೆಂಗಳೂರಿನ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 12 ಕೆ.ಜಿ ಎಂಡಿಎಂಎ ಕ್ರಿಸ್ಟಲ್, 275 ಗ್ರಾಂ ಕೊಕೇನ್, 32 ಕೆ.ಜಿ ಗಾಂಜಾ, 40 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, ಒಂದು ಕಾರು, ಎರಡು ಮೊಬೈಲ್, ₹2.85 ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.

ನಗರದಲ್ಲಿ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ನೈಜೀರಿಯಾ ದೇಶದ ಇಮ್ಯಾನ್ಯುಯಲ್ ಎಂಬುವರನ್ನು ಹೆಬ್ಬಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

2014ರಲ್ಲಿ ವ್ಯಾವಹಾರಿಕ ವೀಸಾದಡಿ ಭಾರತಕ್ಕೆ ಇಮ್ಯಾನ್ಸುಯಲ್ ಬಂದಿದ್ದರು. ಭಾರತೀಯ ಮಹಿಳೆಯನ್ನು ಮದುವೆಯಾಗಿದ್ದರು. ಐದು ಮನೆಗಳನ್ನು ಬಾಡಿಗೆಗೆ ಪಡೆದು ಅಲ್ಲಿ ಮಾದಕ ವಸ್ತುಗಳನ್ನು ದಾಸ್ತಾನು ಮಾಡುತ್ತಿದ್ದರು. ಹೊರ ರಾಜ್ಯ ಮತ್ತು ವಿದೇಶಗಳಿಂದ ಪೆಡ್ಲರ್ಗಳ ಮೂಲಕ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಗಾಂಜಾ ಪೆಡ್ಲರ್ಗಳ ಬಂಧನ: ಯಲಹಂಕ ಉಪನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಪೆಡ್ಲರ್ಗಳಾದ ಆದೇಶ್(19), ಮೊಹಮ್ಮದ್ ನಿಶಾದ್(24) ಎಂಬುವವರನ್ನು ಬಂಧಿಸಿದ್ದಾರೆ.

ಮೂರು ವರ್ಷದ ಹಿಂದೆ ನಗರಕ್ಕೆ ಬಂದಿದ್ದ ಆರೋಪಿಗಳು, ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ₹10.50 ಲಕ್ಷ ಮೌಲ್ಯದ 21 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-428875927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.