ಗುರುವಾರ , ಏಪ್ರಿಲ್ 15, 2021
29 °C

ಬೆಂಗಳೂರು: ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ, ಆಟೊ ಜಖಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Drunk and drive car accident

ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿ ಯುವಕನೊಬ್ಬ ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಆಟೊಗೆ ಗುದ್ದಿಸಿದ್ದಾನೆ.

ಮಲ್ಲೇಶ್ವರ ವೃತ್ತದಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಯುವಕ ಹಾಗೂ ಆತನ ಜೊತೆಗಿದ್ದ ಯುವಕರು, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಆಟೊ ಚಾಲಕನ ಸ್ಥಿತಿ ಗಂಭೀರವಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ವೇಗವಾಗಿ ಬಂದಿದ್ದ ಕಾರು ಆಟೊಗೆ ಗುದ್ದಿ ಉಜ್ಜಿಕೊಂಡು ಹೋಗಿದೆ. ನಂತರ, ಪಾದಚಾರಿ ಮಾರ್ಗ ಏರಿ ಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಸ್ಥಳದಲ್ಲಿ ಸೇರುತ್ತಿದ್ದಂತೆ ಯುವಕರು ಓಡಿಹೋಗಿದ್ದಾರೆ. ಯುವಕರು ಕುಡಿದ ಅಮಲಿನಲ್ಲಿದ್ದರು ಎಂಬುದಾಗಿ ಸ್ಥಳೀಯರು ಹೇಳಿಕೆ ನೀಡಿದ್ದಾರೆ' ಎಂದು ಮಲ್ಲೇಶ್ವರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು