ಬೆಂಗಳೂರು: ‘ಇ–ಖಾತಾ, ಬಿ ಖಾತಾದಿಂದ ಎ ಖಾತಾ ಸೇರಿದಂತೆ ಯಾವ ಪ್ರಕ್ರಿಯೆಗೂ ಸಾರ್ವಜನಿಕರು ಯಾರಿಗೂ ಒಂದೇ ಒಂದು ರೂಪಾಯಿ ಲಂಚ ನೀಡಬಾರದು. ಲಂಚ ಕೇಳಿ ದವರ ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಸುದ್ದಿಗಾರ ರೊಂದಿಗೆ ಮಾತನಾಡಿದರು.

‘ಅಧಿಕಾರಿಗಳಿಗೆ ಸೇರಿದಂತೆ ಯಾವ ಪಕ್ಷದವರಿಗೂ ಲಂಚ ಕೊಡಬಾರದು. ದಲ್ಲಾಳಿಗಳನ್ನು ದೂರ ಇಡಬೇಕು. ಅಧಿಕಾರಿಗಳು ಲಂಚ ಕೇಳಿದರೆ ದೂರು ನೀಡಬೇಕು. ಇದಕ್ಕಾಗಿ ನಿರ್ದಿಷ್ಟ ದೂರವಾಣಿ ಸಂಖ್ಯೆ ನೀಡಲಾಗುವುದು. ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು ‘ಬಿ’ ಖಾತೆಯಿಂದ ‘ಎ’ ಖಾತೆಗೆ ಪರಿವರ್ತನೆ ಮಾಡಿಕೊಂಡು, ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು. ಏಳು ಲಕ್ಷ ಜನರಿಗೆ ಇದರಿಂದ ಉಪಯೋಗಆಗಲಿದೆ ಎಂದು ಮಾಹಿತಿ ನೀಡಿದರು.

‘ಖಾತೆ ದಾಖಲೆಯಲ್ಲಿ ಫೋಟೊ ಸಹ ಇರಲಿದೆ. ಯಾರಾದರೂ ನಕಲಿ ದಾಖಲೆ ನೀಡಿ ಖಾತೆ ಮಾಡಿಸಿಕೊಂಡರೆ ಅದನ್ನು ರದ್ದು ಮಾಡುವ ವ್ಯವಸ್ಥೆಯೂ ಇದೆ. ಉಪ ನೋಂದಣಾಧಿಕಾರಿ ಕಚೇರಿಗೆ ಲಿಂಕ್ ಮಾಡಲಾಗಿದೆ’ ಎಂದರು.

‘ನಿಮ್ಮ ಆಸ್ತಿಗಳ ಮೌಲ್ಯ ಹೆಚ್ಚಳ ಮಾಡಲು ‘ಬಿ’ ಖಾತೆಯಿಂದ ‘ಎ’ ಖಾತೆಗೆ ಪರಿವರ್ತನೆ ಮಾಡಿಕೊಡಲಾಗುತ್ತಿದೆ. ಇದು ಐತಿಹಾಸಿಕ ತೀರ್ಮಾನ. ಇದರಿಂದ ನೀವು ಬ್ಯಾಂಕ್ ನಲ್ಲಿ ಸಾಲ ಪಡೆಯಬಹುದು, ಇತರೇ ಸೌಲಭ್ಯಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಬೆಂಗಳೂರಿನಲ್ಲಿರುವ 23 ಲಕ್ಷ ಆಸ್ತಿಗಳಲ್ಲಿ 16 ಲಕ್ಷ ಎ ಖಾತೆಗಳಿದ್ದರೆ 7 ಲಕ್ಷ ಬಿ ಖಾತೆಗಳಿವೆ. ಕೆಳಮಟ್ಟದ ಅಧಿಕಾರಿಗಳು ಖಾತೆ ವಿಚಾರವಾಗಿ ಲಂಚ ಪಡೆದು ಕಿರುಕುಳ ನೀಡುತ್ತಿದ್ದರು ಎನ್ನುವುದು ನನ್ನ ಗಮನಕ್ಕೆ ಬಂದಿತ್ತು. ಅದಕ್ಕಾಗಿ ಪ್ರತಿ ಶನಿವಾರ ಅಭಿಯಾನ ನಡೆಯಲಿದೆ’ ಎಂದು ತಿಳಿಸಿದರು.

‘ಅಧಿಕಾರಿಗಳು ಸ್ಥಳಕ್ಕೆ ಬಂದು ಆಸ್ತಿ ದಾಖಲೆಗಳ ತೊಂದರೆ ಪರಿಶೀಲಿಸಲಿದ್ದಾರೆ. ಆಸ್ತಿಗಳಿಗೆ ಗುರುತಿನ ಸಂಖ್ಯೆ ನೀಡಲಾಗಿರುತ್ತದೆ. ಇದನ್ನು ಬಳಸಿಕೊಂಡು ತಪ್ಪಿರುವ ದಾಖಲೆ ಸರಿ ಮಾಡ ಲಾಗುವುದು. ಮಾರ್ಗಸೂಚಿ ದರದ ಶೇ 5ರಷ್ಟು ಮೊತ್ತವನ್ನು ಕಟ್ಟಬೇಕಿತ್ತು. ಆದರೆ 100 ದಿನ ರಿಯಾಯಿತಿ ನೀಡಿದ್ದು, ಶೇ 2ರಷ್ಟು ಶುಲ್ಕ ಪಾವತಿ ಮಾಡುವ ಅವಕಾಶ ಕಲ್ಪಿಸಿದ್ದು, ನಿಮ್ಮ ಖಾತೆಯನ್ನು ಫೈಲ್ ರೂಪದಲ್ಲಿ ನೀಡುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.