ಬೆಂಗಳೂರು: ಇ–ಖಾತಾದಲ್ಲಿ ಆಸ್ತಿಯ ಕೆಲವು ವಿವರಗಳನ್ನು ಆನ್ಲೈನ್ನಲ್ಲಿ ಮಾಲೀಕರೇ ತಿದ್ದುಪಡಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಮಾಹಿತಿ ನೀಡಿದರು.

ಬುಧವಾರ ನಡೆದ ಕಾರ್ಯಾಗಾರದಲ್ಲಿ ಅರ್ಜಿಗಳ ಪ್ರಕ್ರಿಯೆ ಮತ್ತು ಅನುಮೋದನಾ ವಿಧಾನಗಳಲ್ಲಿ ಮಾಡಲಾದ ಪರಿಷ್ಕರಣೆಗಳ ಕುರಿತು ಅಧಿಕಾರಿಗಳಿಗೆ ತಿಳಿಸಿ, ಆಸ್ತಿ ಮಾಲೀಕರಿಗೆ ಸಣ್ಣಪುಟ್ಟ ತಿದ್ದುಪಡಿಗಳಿಗೆ ಅವಕಾಶ ನೀಡಿರುವುದರಿಂದ ಅವರು ಪಾಲಿಕೆಗಳ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯ ಕಡಿಮೆಯಾಗುತ್ತದೆ ಎಂದರು.

ತಪ್ಪಾಗಿ ಸಲ್ಲಿಸಿದ ಇ-ಖಾತಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲು ನಾಗರಿಕರಿಗೆ ಅವಕಾಶ ನೀಡುವ ವ್ಯವಸ್ಥೆ ಪರಿಚಯಿಸಲಾಗಿದೆ. ಇದರಿಂದ ಪ್ರಕ್ರಿಯೆಯಲ್ಲಿನ ಅಡಚಣೆಗಳು ಕಡಿಮೆಯಾಗುತ್ತವೆ ಮತ್ತುಹೆಚ್ಚಿನ ಸೌಕರ್ಯ ದೊರೆಯುತ್ತದೆ’ ಎಂದು ತಿಳಿಸಿದರು.

ನಗರದಲ್ಲಿ ಸುಮಾರು 13.05 ಲಕ್ಷ ಎಸ್ಎಎಸ್ ಐಡಿ ಆಧಾರಿತ ಆಸ್ತಿಗಳೊಂದಿಗೆ ಸಂಬಂಧಿಸಿದ ನಾಗರಿಕರು ಈಗ ಸುಲಭವಾಗಿ ತಮ್ಮ ಇ-ಖಾತಾ ಪ್ರಮಾಣಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಂತಿಮ ಇ-ಖಾತಾಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದರಿಂದ ಹಸ್ತಚಾಲಿತ ನಡೆಯುವ ಪ್ರಕ್ರಿಯೆಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ ಎಂದು ಹೇಳಿದರು.

‘ವಹಿವಾಟು/ನೋಂದಣಿಗೆ ಸಿದ್ಧ’ಎಂದು ಗುರುತಿಸಲಾದ ಆಸ್ತಿಗಳಿಗೆ ಸ್ವಯಂಮಾನ್ಯತೆ ಮತ್ತು ಅನುಮೋದನೆ ಸೌಲಭ್ಯವನ್ನು ಪರಿಚಯಿಸಲಾಗಿದೆ. ಇದಕ್ಕಾಗಿ ಋಣಭಾರ ಪ್ರಮಾಣ ಪತ್ರ (ಇಸಿ) ಅಪ್ಲೋಡ್ ಮತ್ತು ಪರಿಶೀಲನೆ ಆಧಾರವಾಗಿರುತ್ತದೆ. ಇದರಿಂದ ಆಸ್ತಿ ವಹಿವಾಟು ಪ್ರಕ್ರಿಯೆ ವೇಗಗೊಳ್ಳುತ್ತದೆ ಎಂದರು.

ಇ-ಖಾತಾ ಅರ್ಜಿ ಮತ್ತು ಅನುಮೋದನಾ ಪ್ರಕ್ರಿಯೆಯನ್ನು ಸರಳ, ಪಾರದರ್ಶಕ ಮತ್ತು ಬಳಕೆದಾರ ಸ್ನೇಹಿಯಾಗಿ ರೂಪಿಸಲಾಗಿದೆ. ಡಿಜಿಟಲ್ ಆಡಳಿತ, ದಕ್ಷತೆ ಮತ್ತು ನಾಗರಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವುದಕ್ಕೆ ಆಡಳಿತ ಬದ್ಧವಾಗಿದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಐದು ನಗರ ಪಾಲಿಕೆಗಳ ಎಲ್ಲ ವಲಯಗಳ ಜಂಟಿ ಆಯುಕ್ತರು, ಕಂದಾಯ ಇಲಾಖೆಯ ಜಂಟಿ ಆಯುಕ್ತರು, ಉಪ ಆಯುಕ್ತರು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-4-33603603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.