ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ವಿದ್ಯುತ್‌ ತಂತಿ ತಗುಲಿ ಬಾಲಕಿಗೆ ಗಾಯ

Published 3 ಜನವರಿ 2024, 15:34 IST
Last Updated 3 ಜನವರಿ 2024, 15:34 IST
ಅಕ್ಷರ ಗಾತ್ರ

ಬೆಂಗಳೂರು: ಬಂಡೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಮನೆ ಎದುರು ಒಣಗಿ ಹಾಕಿದ್ದ ಬಟ್ಟೆ ತೆಗೆದುಕೊಳ್ಳುವ ವೇಳೆ ವಿದ್ಯುತ್ ತಂತಿ ತಗುಲಿ, 9 ವರ್ಷದ ಬಾಲಕಿ ಗಾಯಗೊಂಡಿದ್ದಾಳೆ.

ಇರ್ಫಾನ್ ಅವರ ಪುತ್ರಿ ಜೋಯಾ(9) ಗಾಯಗೊಂಡ ಬಾಲಕಿ. ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ಹೇಳಿದರು.

‘ಇರ್ಫಾನ್ ಅವರು ಪೀಠೋಪಕರಣಗಳ ರಿಪೇರಿ ಕೆಲಸ ಮಾಡಿಕೊಂಡಿದ್ದು, ಕುಟುಂಬದ ಜತೆ ಮಂಗಮ್ಮನಪಾಳ್ಯದಲ್ಲಿ 2ನೇ ಮಹಡಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ. ಮಂಗಳವಾರ ಮಧ್ಯಾಹ್ನ ಬಾಲಕಿ ಮನೆ ಮುಂದೆ ಒಣಗಿ ಹಾಕಿದ್ದ ಬಟ್ಟೆಗಳನ್ನು ತೆಗೆದುಕೊಳ್ಳಲು ಹೋಗಿದ್ದಾಳೆ. ಆಗ ಮನೆ ಎದುರು ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಸುಟ್ಟ ಗಾಯಗಳಿಂದ ಅಸ್ವಸ್ಥವಾಗಿ ಕೆಳಗೆ ಬಿದ್ದಿದ್ದಳು. ತಕ್ಷಣವೇ ಗಮನಿಸಿದ ಮನೆಯವರು ಆಕೆಯನ್ನು ಆಸ್ಪತ್ರೆಗೆ‌ ಕರೆದೊಯ್ದರು’ ಎಂದು ಪೊಲೀಸರು ಹೇಳಿದರು.

‘ಬಾಲಕಿಗೆ ಶೇ 20ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಜೋಯಾ ಚೇತರಿಸಿಕೊಂಡಿದ್ದು, ಆರೋಗ್ಯವಾಗಿದ್ದಾಳೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT