ಬೆಂಗಳೂರು: ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡುವ ಕುರಿತು ಆರು ತಿಂಗಳ ಹಿಂದೆ ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳೊಂದಿಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

‘ಒಂದು ಬಾರಿ ವಿನಾಯಿತಿ ನೀಡಿ ಅನುಮತಿ ನೀಡಬೇಕು. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಎಲ್ಲಾ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ನೀಡಿ ಶಾಶ್ವತ ಸಂಪರ್ಕಕ್ಕೆ ಅನುಮತಿ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಸಿ.ರಮೇಶ್ ಆಗ್ರಹಿಸಿದರು.

‘ರೈತರು ನಿರ್ಮಿಸಿಕೊಂಡಿರುವ ಕೋಳಿ, ಕುರಿ ಸಾಕಣೆ ಹಾಗೂ ತೋಟದ ಮನೆಗಳು, ಇತರೆ ಕೃಷಿ ಚಟುವಟಿಕೆಗಳ ವಿದ್ಯುತ್ ಸಂಪರ್ಕಕ್ಕೂ ದೃಢೀಕರಣ ಪತ್ರ ನೀಡುವುದರಿಂದ ವಿನಾಯಿತಿ ನೀಡಬೇಕು. ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಆಗುತ್ತಿರುವ ತೊಂದರೆ ತಪ್ಪಿಸಬೇಕು. ಹೊಸ ಕಟ್ಟಡ ನಿರ್ಮಿಸುವವರಿಗೆ ಸ್ಥಳೀಯ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳಿಗೆ ಸೂಕ್ತ ಮಾರ್ಗಸೂಚಿ ನೀಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಗೆ ಬೆಂಬಲ ಸೂಚಿಸಿದ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ವಿದ್ಯುತ್ ಸಂಪರ್ಕದ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನೇ ನೆಪ ಮಾಡಿಕೊಂಡು ಒಸಿ, ಸಿಸಿ ಜಾರಿಗೊಳಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ಲೂಟಿಗೆ ಇಳಿದಿದೆ. ಯಾವುದೇ ಹೊರೆಯಿಲ್ಲದೇ ಜನರಿಗೆ ವಿದ್ಯುತ್ ಸಂಪರ್ಕ ಪಡೆಯಲು ಒಸಿಯಿಂದ ವಿನಾಯಿತಿ ನೀಡಬೇಕು. ಸುಪ್ರೀಂಕೋರ್ಟ್ಗೂ ಮನವರಿಕೆ ಮಾಡಿಕೊಡಬೇಕು. ಈ ಕುರಿತು ಸದನದಲ್ಲೂ ಪ್ರಸ್ತಾಪ ಮಾಡುತ್ತೇನೆ’ ಎಂದು ಹೇಳಿದರು. ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು ಗುತ್ತಿಗೆದಾರರ ಅಳಲನ್ನು ಆಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.