ಬೆಂಗಳೂರು: ನಗರದ ದಕ್ಷಿಣ ಪೊಲೀಸ್ ಉಪ ವಿಭಾಗದ ಕಾಲೇಜೊಂದರಲ್ಲಿ ಪುರುಷರ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಅಡಿ ವಿದ್ಯಾರ್ಥಿಯನ್ನು ಹನುಮಂತನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಸವನಗುಡಿಯ ಎಂಜಿನಿಯರಿಂಗ್ ಕಾಲೇಜೊಂದರ ಐದನೇ ಸೆಮಿಸ್ಟರ್ ವಿದ್ಯಾರ್ಥಿ ಜೀವನ್ ಗೌಡ (21) ಬಂಧಿತ ಆರೋಪಿ.

ಆರೋಪಿಯನ್ನು ಬುಧವಾರ ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿಯನ್ನು ಕಳುಹಿಸಲಾಗಿದೆ. ಏಳನೇ ಸೆಮಿಸ್ಟರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಘಟನೆಯು ಅಕ್ಟೋಬರ್ 10ರಂದು ನಡೆದಿದೆ. ಅಕ್ಟೋಬರ್ 15ರಂದು ನೀಡಿದ ದೂರು ಆಧರಿಸಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 64ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಘಟನೆಯಿಂದ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದರು. ಚೇತರಿಸಿಕೊಂಡ ಬಳಿಕ ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ದೂರಿನಲ್ಲಿ ಏನಿದೆ?: ಘಟನೆ ನಡೆದ ದಿನದಂದು ವಿದ್ಯಾರ್ಥಿನಿ ಬೆಳಿಗ್ಗೆ 8.55ರ ಸುಮಾರಿಗೆ ಕಾಲೇಜಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಆರೋಪಿ, ವಿದ್ಯಾರ್ಥಿನಿ ಜತೆಗೆ ಮಾತನಾಡಬೇಕು ಎಂದು ಹೇಳಿದ್ದ. ಅದಾದ ಮೇಲೆ ಊಟದ ವಿರಾಮದಲ್ಲಿ ಪದೇ ಪದೇ ವಿಚಾರಿಸಲು ತೆರಳಿದ್ದ ಸಂದರ್ಭದಲ್ಲಿ, ಏಳನೇ ಬ್ಲಾಕ್ಗೆ ಬರುವಂತೆ ತಿಳಿಸಿದ್ದ. ಅಲ್ಲಿಗೆ ಹೋದಾಗ ಬಲವಂತದಿಂದ ಚುಂಬಿಸಲು ಪ್ರಯತ್ನಿಸಿದ್ದ. ಆರೋಪಿಯಿಂದ ತಪ್ಪಿಸಿಕೊಂಡು ಲಿಫ್ಟ್ ಹತ್ತಿ ಆರನೇ ಮಹಡಿಗೆ ವಿದ್ಯಾರ್ಥಿನಿ ತೆರಳಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಪುರುಷರ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಘಟನೆಯು ಅಂದು ಮಧ್ಯಾಹ್ನ 1.30ರಿಂದ 1.50ರ ನಡುವೆ ನಡೆದಿದೆ ಎಂದು ಪೊಲೀಸರು ಹೇಳಿದರು. ಘಟನೆ ನಡೆದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿತ್ತೇ ಎಂದುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.