ಬೆಂಗಳೂರು: ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ಅವರ ಹೆಸರಿನಲ್ಲಿ ನಕಲಿ ಕಂಪನಿ ಹಾಗೂ ಬ್ಯಾಂಕ್ ಖಾತೆ ತೆರೆದು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸೈಬರ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಾಗದೇವನಹಳ್ಳಿಯ ನಿವಾಸಿ, ಸಾಲ ವಸೂಲಾತಿ ಏಜೆಂಟ್ ಎನ್. ಲಕ್ಷ್ಮೀಶ್ (33), ಕನಕಪುರ ರಸ್ತೆಯ ತಾತಗುಣಿಯ ನಿವಾಸಿ, ಶಾಂಪು ಕಂಪನಿಯ ಸಿಬ್ಬಂದಿ ಎಚ್. ಪ್ರಕಾಶ್ (43), ಜೆ.ಪಿ. ನಗರದ ಏಳನೇ ಹಂತದ ನಿವಾಸಿ, ಸಿವಿಲ್ ಎಂಜಿನಿಯರ್ ಸುನಿಲ್ ಕುಮಾರ್ (45) ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಅರ್ಚಕರ ಹಳ್ಳಿಯ ನಿವಾಸಿ, ಕಾರು ಚಾಲಕ ಪುಟ್ಟಸ್ವಾಮಯ್ಯ (54) ಬಂಧಿತರು.

ಅವರಿಂದ ಒಂದು ಲ್ಯಾಪ್ಟಾಪ್, ವಿವಿಧ ಕಂಪನಿಯ ನಾಲ್ಕು ಮೊಬೈಲ್ಗಳು, ವಿವಿಧ ಬ್ಯಾಂಕ್ ಚೆಕ್ ಬುಕ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಆರೋಪಿಗಳ ವಿರುದ್ಧ ಉತ್ತರ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಕಾರ್ಮಿಕರಿಗೆ ಕಮಿಷನ್ ಆಸೆ ತೋರಿಸಿ ಅವರ ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದುಕೊಳ್ಳುತ್ತಿದ್ದ ಆರೋಪಿಗಳು, ಅವರ ಹೆಸರಿನಲ್ಲಿ ನಕಲಿ ಕಂಪನಿ ಸೃಷ್ಟಿಸುತ್ತಿದ್ದರು. ಬಳಿಕ ಅದೇ ಕಂಪನಿಯ ಹೆಸರಿನಲ್ಲಿ ನೂರಾರು ಬ್ಯಾಂಕ್ ಖಾತೆಗಳನ್ನು ತೆರೆದು ಅವುಗಳನ್ನು ಸೈಬರ್ ವಂಚಕರಿಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು. ನಾಲ್ವರ ಬಂಧನದಿಂದ ದೇಶದಾದ್ಯಂತ ತೆರೆದಿದ್ದ 357 ನಕಲಿ ಬ್ಯಾಂಕ್ ಖಾತೆಗಳನ್ನು ಪತ್ತೆ ಮಾಡಲಾಗಿದೆ’ ಎಂದು ಸೈಬರ್ ಪೊಲೀಸರು ತಿಳಿಸಿದರು.

ಕೋಟ್ಯಂತರ ವಹಿವಾಟು: ‘ನಕಲಿ ದಾಖಲೆ ನೀಡಿ ತೆರೆದಿದ್ದ ಬ್ಯಾಂಕ್ ಖಾತೆಗಳಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ದೇಶದಾದ್ಯಂತ ಎನ್ಸಿಆರ್ಪಿ ಪೋರ್ಟಲ್ನಲ್ಲಿ 100 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಕಾರ್ಮಿಕರ ದಾಖಲೆಗಳನ್ನು ಆರೋಪಿಗಳು ಪಡೆದುಕೊಂಡು ಪ್ರತಿ ದಾಖಲೆಗೆ ₹4ರಿಂದ ₹5 ಸಾವಿರ ನೀಡುತ್ತಿದ್ದರು. ಬ್ಯಾಂಕ್ ಖಾತೆಗಳನ್ನು ಸೈಬರ್ ಕಳ್ಳರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳು ಅವರಿಂದ ದೊಡ್ಡ ಮೊತ್ತದ ಹಣ ಪಡೆದುಕೊಳ್ಳುತ್ತಿದ್ದರು. ಈ ಖಾತೆಗಳನ್ನು ಸೈಬರ್ ಕಳ್ಳರು ವಂಚನೆಗೆ ಬಳಸಿಕೊಳ್ಳುತ್ತಿದ್ದರು. ಡಿಜಿಟಲ್ ಅರೆಸ್ಟ್, ಹೂಡಿಕೆ ಹೆಸರಿನಲ್ಲಿ ಈ ಖಾತೆಗಳಿಗೆ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ಬ್ಯಾಂಕ್ ಸಿಬ್ಬಂದಿ ಶಾಮೀಲು

‘ಇದುವರೆಗೂ ನಡೆದ ತನಿಖೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಹಲವರು ಶಾಮೀಲಾಗಿರುವ ಶಂಕೆಯಿದೆ. ನಕಲಿ ಖಾತೆ ತೆರೆಯಲು ಆರೋಪಿಗಳ ಜತೆಗೆ ಬ್ಯಾಂಕ್ ಅಧಿಕಾರಿಗಳೂ ಶಾಮೀಲಾಗಿರುವುದು ಕಂಡುಬಂದಿದೆ. ಬ್ಯಾಂಕ್ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.