ಬೆಂಗಳೂರು: ನಕಲಿ ಅಂಕಪಟ್ಟಿ ಸೃಷ್ಟಿಸಿ ಸೈಬರ್ ವಂಚನೆ ಎಸಗಿದ ಪ್ರಕರಣದಲ್ಲಿ, ನವದೆಹಲಿಯ ಆರೋಪಿಯೊಬ್ಬರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಜಾಮೀನು ಕೋರಿ ಪ್ರಕರಣದ ಪ್ರಮುಖ ಆರೋಪಿ ರಾಜೀವ್ ಸಿಂಗ್ ಅರೋರಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ತ್ಯಾಗರಾಜ ಎನ್.ಇನವಳ್ಳಿ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.

‘ಪ್ರಕರಣದ ಇತರೆ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಹಾಗಾಗಿ, ಅರ್ಜಿದಾರರಿಗೂ ಜಾಮೀನು ಮಂಜೂರು ಮಾಡಬೇಕು‘ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಪೀಠ ತಿರಸ್ಕರಿಸಿದೆ.

ಪ್ರಕರಣ: ಕಲಬುರಗಿಯ ಏಷಿಯನ್ ಮಾಲ್ನ ಮೊದಲ ಮಹಡಿಯಲ್ಲಿ ‘ಐ 4 ಯು ಗ್ಲ್ಯಾಮ್ ಛಾಯ್ಸ್’ ಹೆಸರಿನ ಬಟ್ಟೆ ಅಂಗಡಿಯ ಒಳಕೋಣೆಯಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಲಾಂಛನಗಳನ್ನು ಬಳಸಿ ನಕಲಿ ಅಂಕಪಟ್ಟಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದರು.

ಐಪಿಸಿ ಕಲಂ 420 (ವಂಚನೆ), 465, 468, 471 (ನಕಲಿ ದಾಖಲೆ ಸೃಷ್ಟಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಮತ್ತು 66 ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನವದೆಹಲಿಯ ನಿವಾಸಿ ರಾಜೀವ್ ಸಿಂಗ್ ಅರೋರಾ ಅಲಿಯಾಸ್ ಅಭನೀಶ್ ಕುಮಾರ್ ಮತ್ತಿತರರನ್ನು ಬಂಧಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-34-460858085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.