ಬೆಂಗಳೂರು: ಹಣಕಾಸು ವಿಚಾರಕ್ಕೆ ಪಾನಮತ್ತ ಕೂಲಿ ಕಾರ್ಮಿಕರ ನಡುವೆ ನಡೆದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾರತ್ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಮಹಾದೇವ (45) ಕೊಲೆಯಾದ ಕಾರ್ಮಿಕ. ಘಟನೆ ಸಂಬಂಧ ರಾಯಚೂರಿನ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತರಾದ ಮಹಾದೇವ ಮತ್ತು ರಾಜು ಹೋಟೆಲ್ನಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ಮಾರತ್ಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಶನಿವಾರ ರಾತ್ರಿ ಸ್ನೇಹಿತರಿಬ್ಬರೂ ಮದ್ಯ ಸೇವಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ರಾಜು, ಮಹಾದೇವನ ಹೊಟ್ಟೆಗೆ ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಾರತ್ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.