ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಸಿಐಡಿ ಇನ್‌ಸ್ಪೆಕ್ಟರ್ ವಿರುದ್ಧ ಎಫ್‌ಐಆರ್‌

ಅಪರಾಧ ಪ್ರಕರಣದಲ್ಲಿ ಜಪ್ತಿಯಾದ ಸ್ವತ್ತು ಹಸ್ತಾಂತರಿಸದ ಆರೋಪ
Published : 1 ಅಕ್ಟೋಬರ್ 2024, 15:53 IST
Last Updated : 1 ಅಕ್ಟೋಬರ್ 2024, 15:53 IST
ಫಾಲೋ ಮಾಡಿ
Comments

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆ ಸಂದರ್ಭದಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದುಕೊಂಡಿದ್ದ ಸ್ವತ್ತುಗಳನ್ನು ಹಸ್ತಾಂತರಿಸದೆ ನಿರ್ಲಕ್ಷ್ಯ ತೋರಿದ ಆರೋಪದಡಿ ಸಿಐಡಿ ಇನ್‌ಸ್ಪೆಕ್ಟರ್ ಎಂ.ಎಸ್‌. ಹಿತೇಂದ್ರ ವಿರುದ್ಧ ಜೆ.ಪಿ.ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಜೆ.ಪಿ.ನಗರ ಪೊಲೀಸ್ ಠಾಣೆಯ ಹಾಲಿ ಇನ್‌ಸ್ಪೆಕ್ಟರ್‌ ಟಿ.ಎಸ್.ರಾಧಾಕೃಷ್ಣ ಅವರು ಇದೇ ಠಾಣೆಯಲ್ಲಿ  2016 ರಿಂದ 2019ರವರೆಗೆ ಕಾರ್ಯನಿರ್ವಹಿಸಿದ್ದ ಹಿತೇಂದ್ರ ವಿರುದ್ಧ ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

‘ಜೆ.ಪಿ.ನಗರ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಅವಧಿಯಲ್ಲಿ ನಡೆದ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿ, ಅವರಿಂದ ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣ, ಪೆನ್‌ ಡ್ರೈವ್, ಮೊಬೈಲ್, ಸಿ.ಡಿ ಹಾಗೂ ಇತರೆ ದಾಖಲಾತಿಗಳನ್ನು ನನಗೆ ಹಸ್ತಾಂತರಿಸಿಲ್ಲ. ಈ ಬಗ್ಗೆ ಹಲವು ಬಾರಿ ಮೌಖಿಕವಾಗಿ ಸೂಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮೇಲಧಿಕಾರಿಗಳ ಮೂಲಕ ನೋಟಿಸ್‌ ನೀಡಿದ್ದರೂ ಹಿಂದಿನ ಇನ್‌ಸ್ಪೆಕ್ಟರ್‌ ಸ್ಪಂದಿಸಿಲ್ಲ’ ಎಂದು ರಾಧಾಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

‘ವರ್ಗಾವಣೆಯಾಗಿ ಹೋಗುವಾಗ ಹಿಂದೆ ಅಮಾನತುಪಡಿಸಿಕೊಂಡ ಮಾಲುಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡದೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ಕಂಡು ಬಂದಿದೆ. ಸುಮಾರು 25 ಪ್ರಕರಣಗಳಿಗೆ ಸಂಬಂಧಿಸಿದಂತೆ ಕಡತಗಳು, ಪ್ರಮುಖ ದಾಖಲಾತಿಗಳು, ಆರೋಪಿಗಳಿಂದ ವಶಕ್ಕೆ ಪಡೆದುಕೊಂಡ ಕೆಲ ಸ್ವತ್ತುಗಳನ್ನು ನೀಡದ ಕಾರಣ ಆರೋಪಿತ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ರಾಧಾಕೃಷ್ಣ ತಿಳಿಸಿದರು. 

ಶೋಕಾಸ್ ನೋಟಿಸ್: ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಜಪ್ತಿ ಮಾಡಿರುವ ಸ್ವತ್ತುಗಳನ್ನು ಸಂಬಂಧಪಟ್ಟ ತನಿಖಾಧಿಕಾರಿ ಹಾಜರು ಪಡಿಸದ ಕಾರಣ ನಗರದ ಸೆಷನ್ಸ್ ನ್ಯಾಯಾಲಯ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಖುದ್ದು ಹಾಜರಿಗೆ ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT