ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಬೆಂಕಿ ಅವಘಡ: ಆರು ಬಸ್‌ಗಳಿಗೆ ಹಾನಿ

Published 29 ಜೂನ್ 2024, 14:17 IST
Last Updated 29 ಜೂನ್ 2024, 14:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜಗೋಪಾಲನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿ ಕೆಟಿಜೆ ನರ್ಸಿಂಗ್‌ ಕಾಲೇಜಿಗೆ ಸೇರಿದ ಆರು ಬಸ್‌ಗಳಿಗೆ ಶನಿವಾರ ಮಧ್ಯಾಹ್ಮ ಆಕಸ್ಮಿಕ ಬೆಂಕಿ ತಗುಲಿದ್ದು, ಭಾಗಶಃ ಭಸ್ಮವಾಗಿವೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಯಶಸ್ವಿಯಾದರು.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನರ್ಸಿಂಗ್‌ ಕಾಲೇಜು ಪಕ್ಕದ ಖಾಲಿ ಸ್ಥಳದಲ್ಲಿ ಹಳೆಯ ಬಸ್‌ಗಳನ್ನು ನಿಲುಗಡೆ ಮಾಡಲಾಗಿತ್ತು. ಶನಿವಾರ ಮಧ್ಯಾಹ್ನ 2.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಕಾರಣ ಗೊತ್ತಾಗಿಲ್ಲ. ಬೆಂಕಿ ಬಿದ್ದಿರುವುದನ್ನು ಗಮನಿಸಿದ್ದ ಸ್ಥಳೀಯರು ಕರೆ ಮಾಡಿದ್ದರು. ತಕ್ಷಣವೇ ಸ್ಥಳಕ್ಕೆ ತೆರಳಿ ಬೆಂಕಿ ವ್ಯಾಪಿಸುವುದನ್ನು ತಡೆಯಲಾಯಿತು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT