ಬೆಂಗಳೂರು: ಡ್ರಗ್ಸ್ ಪೆಡ್ಲರ್ಗಳು, ಗಿರಾಕಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರ ಪೊಲೀಸರು, ಮತ್ತೆ ₹5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಬಾಗಲೂರು, ಅಶೋಕನಗರ ಠಾಣೆಯ ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಇಬ್ಬರು ವಿದೇಶಿ ಪೆಡ್ಲರ್ಗಳೂ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ:
ಸಿಸಿಬಿಯ ಇನ್ಸ್ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ಮೋಹನ್ಕುಮಾರ್ ಲೇಔಟ್ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನೈಜೀರಿಯಾ ಒಬೈಯಸಿ ಚಿಗೋಜಿ ದವಿ ಹಾಗೂ ಸನಿ ಸಾದಿಕ್ ಎಂಬುವವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಬಂಧಿತರಿಂದ ₹2.20 ಕೋಟಿ ಮೌಲ್ಯದ 1 ಕೆ.ಜಿ. 120 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, ಎರಡು ಮೊಬೈಲ್ ಫೋನ್, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2024ರಲ್ಲಿ ವಿದ್ಯಾರ್ಥಿ ವೀಸಾ ಪಡೆದು ನೈಜೀರಿಯಾ ಪ್ರಜೆಗಳು ಭಾರತಕ್ಕೆ ಬಂದು ಉತ್ತರ ಪ್ರದೇಶದ ಕಾಲೇಜಿನಲ್ಲಿ ಓದುತ್ತಿದ್ದರು. ನಂತರ, ಬೆಂಗಳೂರಿಗೆ ಬಂದು ಬಾಗಲೂರಿನ ಮೋಹನ್ಕುಮಾರ್ ಲೇಔಟ್ನಲ್ಲಿ ವಾಸವಾಗಿದ್ದರು. ಮಾದಕ ಪದಾರ್ಥಗಳ ಮಾರಾಟ ಮಾಡಲು ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕೇರಳದ ಮೊಹಮ್ಮದ್ ಮುಸ್ತಫಾ ಎಂಬ ಆರೋಪಿಯನ್ನು ಅಶೋಕನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬೀದಿ ವ್ಯಾಪಾರ ಮಾಡಿಕೊಂಡಿದ್ದ ಮೊಹಮ್ಮದ್ ಮುಸ್ತಫಾ, ಕೇರಳದಿಂದ ಹೈಡ್ರೊಗಾಂಜಾ ಖರೀದಿಸಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ. ಆತನಿಂದ ₹2 ಕೋಟಿ ಮೌಲ್ಯದ 2 ಕೆ.ಜಿ. ಹೈಡ್ರೊಗಾಂಜಾ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಮೂವರ ಬಂಧನ ಸೆರೆ: ಹೈಡ್ರೊಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಜಯ್ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ₹1.05 ಕೋಟಿ ಮೌಲ್ಯದ 1 ಕೆ.ಜಿ. 50 ಗ್ರಾಂ ಹೈಡ್ರೊಗಾಂಜಾ, ಒಂದು ಕಾರು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾ ವ್ಯಾಪ್ತಿ ಭೂಪಸಂದ್ರದ ಬಳಿ ಮೂವರು ಹೈಡ್ರೊ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಕೇರಳದ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ, ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಡ್ರಗ್ಸ್ ಪೂರೈಕೆದಾರ ಕೇರಳದಲ್ಲಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.