ಬೆಂಗಳೂರು: ಫುಡ್ ಡೆಲಿವರಿ ಹುಡುಗರನ್ನು ಅಡ್ಡಗಟ್ಟಿ ದರೋಡೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೇಪಾಳ ಮೂಲದ ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20), ಸಮೀರ್ ಲೋಹಾರ್ (24) ಬಂಧಿತರು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಬಂಧಿತರಿಂದ ಒಂಬತ್ತು ಮೊಬೈಲ್ ಫೋನ್ಗಳು ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಫುಡ್ ಡೆಲಿವರಿ ಹುಡುಗ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳೆಲ್ಲರೂ ಕೊಡತಿ ಗೇಟ್ ಬಳಿ ವಾಸವಾಗಿದ್ದರು. ಖಾಸಗಿ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಸುಲಭವಾಗಿ ಹಣ ಸಂಪಾದನೆ ಮಾಡಲು ಸಂಚು ರೂಪಿಸಿದ ಆರೋಪಿಗಳು, ರಾತ್ರಿ ವೇಳೆ ಫುಡ್ ಡೆಲಿವರಿ ಹುಡುಗರ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಿ, ಮೊಬೈಲ್ ದೋಚಿ ಪರಾರಿ ಆಗುತ್ತಿದ್ದರು. ಸೆ.13ರಂದು ರಾತ್ರಿ 11.30ರ ಸುಮಾರಿಗೆ ಕಸವನಹಳ್ಳಿ ರಸ್ತೆ ಮಾರ್ಗದಲ್ಲಿ ಫುಡ್ ಡೆಲಿವರಿಗೆ ಹೋಗುತ್ತಿದ್ದ ಸುರೇಶ್ ಅವರ ಬೈಕ್ ಅನ್ನು ಆರೋಪಿಗಳು ಅಡ್ಡಗಟ್ಟಿದ್ದರು. ಮೂರು ಬೈಕ್ನಲ್ಲಿ ಬಂದಿದ್ದ ಆರೋಪಿಗಳು, ಸುರೇಶ್ ಅವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಸುರೇಶ್ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ಳಂದೂರು ಅಲ್ಲದೇ ಹೆಬ್ಬಗೋಡಿ, ಪರಪ್ಪನ ಅಗ್ರಹಾರ, ಬಂಡೆಪಾಳ್ಯ, ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ 9 ಮೊಬೈಲ್ಗಳನ್ನು ಆರೋಪಿಗಳು ದೋಚಿದ್ದರು. ಕಳವು ಮಾಡಿದ ಮೊಬೈಲ್ ಫೋನ್ಗಳನ್ನು ಆರೋಪಿಗಳೇ ಬಳಸಿಕೊಳ್ಳುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಬೇರೆ ಎಲ್ಲಾದರೂ ಮಾರಾಟ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.