ಬೆಂಗಳೂರು: ಅಂಗಡಿ ಹಾಗೂ ಗೋದಾಮುಗಳಲ್ಲಿ ವಿದೇಶಿ ಸಿಗರೇಟ್ಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆಡುಗೋಡಿಯ ಶಿವಕುಮಾರ್ ಹಾಗೂ ಕಾಟನ್ಪೇಟೆಯ ಮೊಹಮ್ಮದ್ ಅತೀಕ್ ಬಂಧಿತರು.

ಗಾಂಧಿನಗರದ ಐದನೇ ಮುಖ್ಯರಸ್ತೆಯ ತ್ರಿಭುವನ್ ಕಟ್ಟಡದಲ್ಲಿ ಅಂಗಡಿ ಹಾಗೂ ಗೋದಾಮಿನಲ್ಲಿ ಆರೋಪಿಗಳು ನಿಷೇಧಿತ ವಿದೇಶಿ ಸಿಗರೇಟ್ ದಾಸ್ತಾನು ಮಾಡಿಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ, ಅಂಗಡಿ– ಗೋದಾಮುಗಳ ಮೇಲೆ ದಾಳಿ ನಡೆಸಿ ₹35 ಲಕ್ಷ ಮೌಲ್ಯದ 1,026 ಬಂಡಲ್ ವಿದೇಶಿ ಸಿಗರೇಟ್ ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ’ (ಕೋಟ್ಪಾ) ಅಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ತಲಘಟ್ಟಪುರ ಠಾಣೆ ಪೊಲೀಸರ ಕಾರ್ಯಾಚರಣೆ: ಅಕ್ರಮವಾಗಿ ಇ-ಸಿಗರೇಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ತಲಘಟ್ಟಪುರ ಠಾಣೆ ಪೊಲೀಸರು, ₹10 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿ, ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಹಿಂಭಾಗದ ಖಾಲಿ ಜಾಗದಲ್ಲಿ ಇ-ಸಿಗರೇಟ್ಗಳನ್ನು ಕಾರಿನಲ್ಲಿ ತಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಒಂದು ಕಾರು, ₹4 ಸಾವಿರ ನಗದು, 420 ಇ–ಸಿಗರೇಟ್ಗಳು, ಇಲವರ್ಡ್ ಕಂಪನಿಯ 20 ಇ–ಸಿಗರೇಟ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇ–ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದು ಕೇಂದ್ರ ಸರ್ಕಾರವು ಹಿಂದೆಯೇ ನಿಷೇಧ ಮಾಡಿತ್ತು. ಆದರೂ ಆರೋಪಿಗಳು ಹೊರ ರಾಜ್ಯದಿಂದ ಇ–ಸಿಗರೇಟ್, ಅದರ ಲಿಕ್ವಿಡ್, ಪಾಡ್, ಬ್ಯಾಟರಿ ಹಾಗೂ ಇತರೆ ಬಿಡಿಭಾಗಗಳನ್ನು ತಂದು ಮಾರಾಟ ಮಾಡುತ್ತಿರುವುದು ನಗರದಲ್ಲಿ ಕಂಡುಬರುತ್ತಿದೆ. ಈ ಹಿಂದೆಯೂ ನಗರದ ಕುಂಬಾರಪೇಟೆ ಗೋದಾಮಿನ ಮೇಲೆ ದಾಳಿ ನಡೆಸಿ, ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.