ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು : ₹14.90 ಲಕ್ಷದ ವಿದೇಶಿ ಸಿಗರೇಟ್‌ ಜಪ್ತಿ

Published 17 ಜೂನ್ 2023, 15:20 IST
Last Updated 17 ಜೂನ್ 2023, 15:20 IST
ಅಕ್ಷರ ಗಾತ್ರ

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ದಾಳಿ ನಡೆಸಿ, ₹ 14.90 ಲಕ್ಷದ ನಿಷೇಧಿತ ವಿದೇಶಿ ಸಿಗರೇಟ್‌ ಪ್ಯಾಕ್‌ ಅನ್ನು ಜಪ್ತಿ ಮಾಡಿದ್ದಾರೆ.

ಗೋದಾಮಿನಲ್ಲಿ 4,650 ಪ್ಯಾಕ್‌ಗಳನ್ನು ದಾಸ್ತಾನು ಮಾಡಲಾಗಿತ್ತು. ಅವುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿ ನಿಷೇಧಿತ ಸಿಗರೇಟ್‌ ಅನ್ನು ವಿದೇಶದಿಂದ ಅಕ್ರಮವಾಗಿ ತಂದು ಮಾರಾಟ ಮಾಡುತ್ತಿದ್ದ.

ತಿಲಕ್‌ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪೂಮಾ ಕಂಪನಿಯ ಪ್ಯಾಂಟ್ಸ್‌ ಹಾಗೂ ಟಿ–ಶರ್ಟ್‌ ಅನ್ನು ನಕಲು ಮಾಡಿ ಕಳಪೆ ಗುಣಮಟ್ಟದ ಬಟ್ಟೆಗಳಿಗೆ ಪೂಮಾ ಕಂಪನಿಯ ಲೇಬಲ್‌ ಅಂಟಿಸಿ ಮಾರಾಟ ಮಾಡಲಾಗುತ್ತಿತ್ತು. ಪೂಮಾ ಕಂಪನಿಯದ್ದೇ ಬಟ್ಟೆಗಳೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿತ್ತು. ₹ 5 ಲಕ್ಷದ ಬಟ್ಟೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಸಿಸಿಬಿ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT