ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿರಾಶ್ರಿತರ ಕೇಂದ್ರದಿಂದ ನಾಲ್ವರು ವಿದೇಶಿ ಮಹಿಳೆಯರು ಪರಾರಿಯಾಗಿದ್ದಾರೆ.

ಮೇ 11ರಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಕಟ್ಟಡದ ಎರಡನೇ ಅಂತಸ್ತಿನ ಕಿಟಕಿಯ ಸರಳು ಮುರಿದು ಉಗಾಂಡದ ಟೋಪಿಸ್ಟಾ, ನಾಗವಾ, ಸಫೈನಾ ಹಾಗೂ ಬುರುಂಡಿಯ ಫಿಟಿನಾ ಎಂಬುವರು ಪಾರಾರಿಯಾಗಿದ್ದಾರೆ. ಈ ಸಂಬಂಧ ಕೇಂದ್ರದ ವ್ಯವಸ್ಥಾಪಕ ಎನ್. ಶ್ರೀನಿವಾಸ್ ಎಂಬವರು ದೂರು ನೀಡಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಾದಕ ವಸ್ತು ಮಾರಾಟ ಹಾಗೂ ಅಕ್ರಮ ವಾಸ ಆರೋಪದ ಮೇರೆಗೆ ಸ್ಥಳೀಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಒ) ಅಧಿಕಾರಿಗಳ ಸೂಚನೆ ಮೇರೆಗೆ ದೊಡ್ಡಗುಬ್ಬಿಯಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿ ಇರಿಸಲಾಗಿತ್ತು.

ಆರೋಪಿಗಳ ಪೈಕಿ ಟೋಪಿಸ್ಟಾ ಮತ್ತು ನಾಗವಾ ಅವರನ್ನು ಹೆಣ್ಣೂರು ಠಾಣೆ ಮತ್ತು ಸಫೈನಾ ಎಂಬಾಕೆಯನ್ನು ಪರಪ್ಪನ ಅಗ್ರಹಾರ ಠಾಣೆ ಹಾಗೂ ಫಿಟಿನಾ ಎಂಬಾಕೆಯನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಿಟ್ಟು ಹೋಗಿದ್ದರು. ಆದರೆ, ಆರೋಪಿಗಳು ಮುಂಜಾನೆ 3ರಿಂದ 6 ಗಂಟೆ ಅವಧಿಯಲ್ಲಿ ಕಟ್ಟಡದ 2ನೇ ಮಹಡಿಯಲ್ಲಿರುವ ಕೋಣೆಯ ಕಿಟಕಿಯ ಗ್ರಿಲ್ ಮುರಿದು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಜತೆಗೆ ಆರೋಪಿಗಳನ್ನು ಬಂಧಿಸಿ, ಕರೆ ತಂದಿದ್ದ ಸಂಬಂಧಿಸಿದ ಪೊಲೀಸ್ ಠಾಣೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-14-1768848633

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.