ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಸುಲಿಗೆಕೋರರನ್ನು ಬಂಧಿಸಿರುವ ಹೆಬ್ಬಗೋಡಿ ಠಾಣೆ ಪೊಲೀಸರು, ಅವರಿಂದ ಮೊಬೈಲ್ ಫೋನ್, ದ್ವಿಚಕ್ರ ವಾಹನ, ಆಟೊ ವಶಪಡಿಸಿಕೊಂಡಿದ್ದಾರೆ.

ಜಿಗಣಿ ಹೋಬಳಿಯ ಜನತಾ ಕಾಲೊನಿ ನಿವಾಸಿ ಹರಿಕೃಷ್ಣ (22), ಕಂಚನಾಯಕನಳ್ಳಿ ದಿಣ್ಣೆ ನಿವಾಸಿ ಯೋಗೇಶ್ (19), ಶಿಕಾರಿಪಾಳ್ಯ ನಿವಾಸಿ ಶಾಹಿಕ್ ತೌಫಿದ್ (19) ಬಂಧಿತರು.

ಹುಲಿಮಂಗಲ ಮುಖ್ಯರಸ್ತೆಯ ಬಾರ್ವೊಂದರ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಬೆದರಿಸಿ, ಮೊಬೈಲ್ ಕಿತ್ತುಕೊಂಡು ಇಬ್ಬರು ಪರಾರಿಯಾಗಿ ದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಮತ್ತೊಂದು ಪ್ರಕರಣದಲ್ಲಿ ಯಾರಂಡಹಳ್ಳಿಯಲ್ಲಿ ಮೂವರು ಅಪರಿಚಿತರು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾಗಿದ್ದರು.

‘ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡರು. ಬಾತ್ಮೀದಾರರ ಮಾಹಿತಿ ಆಧರಿಸಿ ಶಿಕಾರಿಪಾಳ್ಯದ ಸಮೀಪ ಇಬ್ಬರು ವ್ಯಕ್ತಿಗಳನ್ನು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಯಿತು. ಆರೋಪಿಗಳು ಮೊಬೈಲ್ ಸುಲಿಗೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡರು’ ಎಂದು ಪೊಲೀಸರು ತಿಳಿಸಿದರು.

ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಚರಕನಳ್ಳಿ ಲೇಔಟ್ವೊಂದರ ಸಮೀಪ ಇಬ್ಬರು ವ್ಯಕ್ತಿಗಳನ್ನು ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಟೊ ಸಮೇತ ವಶಕ್ಕೆ ಪಡೆಯಲಾಯಿತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-1103637224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.