ಬೆಂಗಳೂರು: ಉದಯಭಾನು ಕಲಾಸಂಘ ಹಾಗೂ ನಾರಾಯಣ ನೇತ್ರಾಲಯದ ಸಹಯೋಗದಲ್ಲಿ ಭಾನುವಾರ ಉಚಿತ ನಾಗರಿಕ ಆರೋಗ್ಯ ಪಾಲನಾ ಕಾರ್ಯಕ್ರಮದ ಅಡಿಯಲ್ಲಿ 365ನೇ ನೇತ್ರ ತಪಾಸಣೆ ಶಿಬಿರ ನಡೆಯಿತು.

ವಿನಾಯಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಗಾಯತ್ರಿ ಚಂದ್ರಮೂರ್ತಿ ಮಾತನಾಡಿ, ‘ಉದಯಭಾನು ಕಲಾಸಂಘವು ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ, ಶಿಕ್ಷಣವನ್ನು ಒದಗಿಸುತ್ತಿರುವುದು ಶ್ಲಾಘನೀಯ’ ಎಂದರು.

ಡಾ. ಆಯಶ್ ಅವರು ಶಿಬಿರದಲ್ಲಿ ಪಾಲ್ಗೊಂಡಿದ್ದ ಫಲಾನುಭವಿಗಳನ್ನು ಪರೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿ ಪೊರೆ ಶಸ್ತ್ರಚಿಕಿತ್ಸೆಗೆ ಮಾರ್ಗದರ್ಶನ ನೀಡಿದರು. ಈ ಶಿಬಿರದಲ್ಲಿ 120ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಾರಾಯಣ ನೇತ್ರಾಲಯದ ಶಿಬಿರ ಸಂಯೋಜಕ ಸುಭಾಷ್, ಸಂಘದ ಉಪಾಧ್ಯಕ್ಷ ಬಿ.ಎಸ್.ಸತ್ಯನಾರಾಯಣ, ಸಹಾಯಕ ಕಾರ್ಯದರ್ಶಿ ಕೆ.ಎನ್. ಸೋಮಶೇಖರ್ ಮತ್ತು ಎಚ್.ಎಸ್. ಕಪಿನಯ್ಯ, ಕೋಶಾಧ್ಯಕ್ಷ ಎಸ್. ಅನಿಲ್ ಕುಮಾರ್, ಸದಸ್ಯ ಕೆ.ಎಲ್. ರಾಮಚಂದ್ರ, ಭಾನುಮತಿ ಉಪಸ್ಥಿತರಿದ್ದರು.

ಮೇ 24ರಂದು 366ನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಇದರ ಜೊತೆಗೆ 285ನೇ ಉಚಿತ ದಂತ ತಪಾಸಣಾ ಶಿಬಿರ ನಡೆಯಲಿದ್ದು, ಆಸಕ್ತರು ಸಂಘದ ಕಾರ್ಯಾಲಯದಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ: 080-26609343/26601831, 99802 04965.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-4-685308412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.