ಬೆಂಗಳೂರು: ಪ್ರಾದೇಶಿಕ ಗುರುಮಠ ಸ್ಥಾಪನೆ, ಸಂತ ಪೇತ್ರರ ಗುರುಮಂದಿರದ ಸಂಪೂರ್ಣ ಅಡಳಿತವನ್ನು ಕರ್ನಾಟಕ ಧರ್ಮಾಧ್ಯಕ್ಷರಿಗೆ ಮೀಸಲಿಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ಧರ್ಮಸಭೆಗೆ ಕನ್ನಡ ಗುರುಗಳನ್ನೇ ಧರ್ಮಾಧ್ಯಕ್ಷರನ್ನಾಗಿ ನೇಮಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

ಸಾಹಿತಿ ಎಲ್.ಹನುಮಂತಯ್ಯ ಮಾತನಾಡಿ, ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಹೇಳಿದರು.

‘ನಾವು ವ್ಯಾಟಿಕನ್ ನಗರದಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿಲ್ಲ. ಬೆಂಗಳೂರು ಮತ್ತು ರಾಜ್ಯದಾದ್ಯಂತ ಇರುವ ಚರ್ಚ್ಗಳಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿದ್ದೇವೆ. ಇದಕ್ಕೆ ಸುಪ್ರೀಂ ಕೋರ್ಟ್ ಕೂಡ ವಿರೋಧಿಸಲು ಸಾಧ್ಯವಿಲ್ಲ. ಕನ್ನಡಕ್ಕೆ ಕ್ರೈಸ್ತರ ಕೊಡುಗೆ ದೊಡ್ಡದು’ ಎಂದು ಹೇಳಿದರು.

‘ಕ್ರೈಸ್ತರು ತಮ್ಮ ಮಿಷನರಿಗಳ ಮೂಲಕ ಶಿಕ್ಷಣ ಕೊಡಿಸುವ ಕೆಲಸ ಮಾಡಿದ್ದಾರೆ. ಸ್ಥಳೀಯ ಭಾಷೆಯಲ್ಲಿಯೇ ಶಿಕ್ಷಣ ಕೊಡಬೇಕೆನ್ನುವುದನ್ನು ಹೇಳಿಕೊಟ್ಟಿದ್ದಾರೆ. ಇದು ಯಾಕೆ ಈಗಿನ ಧರ್ಮದ ಅತ್ಯುನ್ನತ ಸ್ಥಾನದಲ್ಲಿ ಇರುವ ಧರ್ಮಾಧ್ಯಕ್ಷರಿಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿಮಗಾಗುವ ಸಮಸ್ಯೆ ಏನು? ಕನ್ನಡ ಭಾಷೆಯಲ್ಲಿ ತೊಡಕುಗಳಿದ್ದರೆ ನಿವಾರಿಸುವ ಕೆಲಸ ಮಾಡೋಣ. ಅದಕ್ಕೆ ಸಾಹಿತ್ಯ ಪರಿಷತ್ತು ಒಳಗೊಂಡಂತೆ ಅನೇಕ ಸಂಸ್ಥೆಗಳು, ಸರಕಾರಿ ಇಲಾಖೆಗಳು ತಯಾರಾಗಿವೆ’ ಎಂದು ತಿಳಿಸಿದರು.

ಅನ್ಯ ಭಾಷಿಕರು ಬೆಂಗಳೂರಿನಲ್ಲಿ ನಮ್ಮ ಜಾಗವನ್ನು ಆಕ್ರಮಿಸಿಕೊಳ್ಳಲು ಪ್ರಯತ್ತಿಸುತ್ತಿದ್ದಾರೆ. ಹಿಂದಿ ವಲಸಿಗರು ಅತಿಹೆಚ್ಚು ಕೆಲಸಕ್ಕಾಗಿ, ಅನ್ನಕ್ಕಾಗಿ ನಗರಕ್ಕೆ ಬರುತ್ತಿದ್ದಾರೆ. ಇಲ್ಲಿಗೆ ಬಂದಿರುವ ಹಲವರು ಕನ್ನಡವನ್ನು ಕಲಿತು ಮಾತನಾಡುವವರು ಇದ್ದಾರೆ. ಆದರೆ, ಇನ್ನು ಕೆಲವರು ಕನ್ನಡವನ್ನು ಕಲಿಯದೇ ಹಿಂದಿಯಲ್ಲಿಯೇ ವ್ಯವಹರಿಸುತ್ತಿದ್ದಾರೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಎ.ಐಸಾಕ್, ಡಾ.ರಾಜ್ ಕುಮಾರ್ ಆಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಸಾಹಿತಿಗಳಾದ ಮನು ಬಳಿಗಾರ್, ರೀಟಾ, ಹೋರಾಟಗಾರರಾದ ರಾ.ನಂ.ಚಂದ್ರಶೇಖರ್, ಆರ್.ಎ.ಪ್ರಸಾದ್, ವ.ಚ.ಚನ್ನೇಗೌಡ, ಪದ್ಮಿನಿ ನಾಗರಾಜ್, ಸಂಘದ ಪದಾಧಿಕಾರಿಗಳಾದ ಅಂಥೋಣಿ ರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.