ಬೆಂಗಳೂರು: ಉಪ್ಪಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 23ರಿಂದ 25ರವರೆಗೆ ವಿವಿಧ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ಸಂಚಾರ ಮಾರ್ಗದಲ್ಲಿ ಮಾರ್ಪಾಡು ಮಾಡಲಾಗಿದೆ.

ಪ್ರತಿಭಟನೆ ವೇಳೆ ಶೇಷಾದ್ರಿ ರಸ್ತೆ ಮೂಲಕ ಜನರು ಹಾಗೂ ವಾಹನಗಳು ಬರುವ ಕಾರಣ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಸುಗಮ ಸಂಚಾರ ದೃಷ್ಟಿಯಿಂದ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ: ಶಾಂತಲಾ ಜಂಕ್ಷನ್ ಮತ್ತು ಖೋಡೆ ಸರ್ಕಲ್ನಿಂದ ಆನಂದರಾವ್ ಮೇಲ್ಸೇತುವೆ, ಹಳೆ ಜೆಡಿಎಸ್ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಸ್ವಾತಂತ್ರ್ಯ ಉದ್ಯಾನದವರೆಗೆ

ಪರ್ಯಾಯ ಮಾರ್ಗ: ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರೂ ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ, ರೇಸ್ ಕೋರ್ಸ್ ರಸ್ತೆ.

ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ.ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರೂ ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆ ಮೂಲಕ ಸಂಚರಿಸಬೇಕು.

ಚಾಲುಕ್ಯ ಸರ್ಕಲ್ನಿಂದ ಮೈಸೂರು ಬ್ಯಾಂಕ್ ಕಡೆಗೆ ಚಾಲುಕ್ಯ ಸರ್ಕಲ್, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ನಿಂದ ತೆರಳಬಹುದು.

ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಹಾಗೂ ಸುಬ್ಬಣ್ಣ ಜಂಕ್ಷನ್ನಿಂದ ಬಲ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.