ಬೆಂಗಳೂರು: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 12ರಂದು ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸ್ವಾತಂತ್ರ್ಯ ಉದ್ಯಾನದ ಸುತ್ತಮತ್ತಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್ನಿಂದ ಆನಂದ ರಾವ್ ಮೇಲ್ಸೇತುವೆ, ಶೇಷಾದ್ರಿ ರಸ್ತೆಯಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ವೃತ್ತ, ಶೇಷಾದ್ರಿಪುರ, ನೆಹರು ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ, ರೇಸ್ ಕೋರ್ಸ್ ರಸ್ತೆಯ ಕಡೆಗೆ ವಾಹನಗಳು ಸಂಚರಿಸಬಹುದು.

ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ವೃತ್ತದ ಕಡೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ,ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ರಾಜೀವ್ ಗಾಂಧಿ ವೃತ್ತ, ಸ್ವಸ್ತಿಕ್, ನೆಹರು ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆಯ ಮೂಲಕ ಸಂಚರಿಸಬಹುದು.

ಚಾಲುಕ್ಯ ವೃತ್ತದಿಂದ ಮೈಸೂರು ಬ್ಯಾಂಕ್ ಕಡೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಚಾಲುಕ್ಯ ವೃತ್ತ, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಮೂಲಕ ವಾಹನಗಳು ಸಂಚರಿಸಬಹುದು.

ಕಾಳಿದಾಸ ರಸ್ತೆಯ ಕನಕದಾಸ ಜಂಕ್ಷನ್ ಕಡೆಯಿಂದ ಸ್ವಾತಂತ್ರ್ಯ ಉದ್ಯಾನ ಕಡೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರು, ಕನಕದಾಸ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

ಮೌರ್ಯ/ಸುಬ್ಬಣ್ಣ ಜಂಕ್ಷನ್ನಿಂದ ಸ್ವಾತಂತ್ರ್ಯ ಉದ್ಯಾನದ ಕಡೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸುಬ್ಬಣ್ಣ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ಆನಂದರಾವ್ ವೃತ್ತ ಕಡೆಗೆ ವಾಹನ ಸವಾರರು ಚಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.