ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ‘ಗೇಮ್ಸ್ ಕ್ರಾಫ್ಟ್’ ಕಂಪನಿ ನಿರ್ದೇಶಕರಾದ ದೀಪಕ್ ಸಿಂಗ್ ಅಹ್ಲಾವತ್, ಪೃಥ್ವಿರಾಜ್ ಸಿಂಗ್ ಮತ್ತು ವಿಕಾಸ್ ತನೇಜಾ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ತಮ್ಮ ಬಂಧನವನ್ನು ಅಕ್ರಮ ಎಂದು ಘೋಷಿಸುವಂತೆ ಕೋರಿ ಗುರುಗ್ರಾಮದ ದೀಪಕ್ ಸಿಂಗ್ (40) ಮತ್ತು ಇತರರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ದೀಪಕ್ ಸಿಂಗ್ ಪರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲ ಎಸ್.ಮುರಳೀಧರ್, ‘ಗೇಮ್ಸ್ ಕ್ರಾಫ್ಟ್ ವಿರುದ್ಧ 2026ರ ಜನವರಿಯಲ್ಲಿ ಇ.ಡಿ ಜಾರಿ ಮಾಡಿದ್ದ ಎಫ್ಐಆರ್ಗೆ ಹೈಕೋರ್ಟ್ನ ಸಮನ್ವಯ ನ್ಯಾಯಪೀಠ ಈಗಾಗಲೇ ತಡೆ ನೀಡಿದೆ. ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ–2025 ಅನ್ನು ಜಾರಿಗೆ ತಂದ ದಿನದಿಂದಲೂ ಗೇಮ್ಸ್ ಕ್ರಾಫ್ಟ್ ತನ್ನ ಕಾರ್ಯಚಟುವಟಿಕೆ ನಿಲ್ಲಿಸಿದೆ’ ಎಂದರು.

‘ತೆಲಂಗಾಣದಲ್ಲಿ ದಾಖಲಾಗಿರುವ ಎಫ್ಐಆರ್ ಆಧರಿಸಿ ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೀಪಕ್ ಮತ್ತು ಪೃಥ್ವಿರಾಜ್ ಅವರನ್ನು ಮೇ 8 ರಂದು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. ಟ್ರಾನ್ಸಿಟ್ ರಿಮ್ಯಾಂಡ್ ಪಡೆದು ಬೆಂಗಳೂರಿಗೆ ಕರೆತಂದು ಬಂಧಿಸಿಡಲಾಗಿದೆ. ಇದು ಸಂಪೂರ್ಣವಾಗಿ ಅಕ್ರಮ ಬಂಧನ’ ಎಂದರು.

ಪೃಥ್ವಿರಾಜ್ ಸಿಂಗ್ ಮತ್ತು ವಿಕಾಸ್ ತನೇಜಾ ಪರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲ ಸಜನ್ ಪೂವಯ್ಯ ಅವರು, ‘ನಮ್ಮ ಅರ್ಜಿಗಳಲ್ಲೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೂರೂ ಅರ್ಜಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿತು.

ಪ್ರಕರಣ: ‘ವಿಕಾಸ್ ತನೇಜಾ, ‘ಗೇಮ್ಸ್ ಕ್ರಾಫ್ಟ್ ಮತ್ತು ರಮ್ಮಿ ಕಲ್ಚರ್ ಟೆಕ್ನಾಲಜೀಸ್’ ನಿರ್ದೇಶಕ. ಇವರು ಮಾಜಿ ಪ್ರಧಾನ ಹಣಕಾಸು ಅಧಿಕಾರಿ ರಮೇಶ್ ಪ್ರಭು ಜೊತೆ ಸೇರಿ ₹250 ಕೋಟಿ ಮೊತ್ತವನ್ನು, ‘ಫ್ಯೂಚರ್ಸ್ ಮತ್ತು ಆಪ್ಷನ್ಸ್ ಹಾಗೂ ಮ್ಯುಚುವಲ್ ಫಂಡ್ಸ್’ನಲ್ಲಿ ಹೂಡಿಕೆ ಮಾಡುವುದಾಗಿ ಹೇಳಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಕಂಪನಿಯು ಆನ್ಲೈನ್ ಗೇಮಿಂಗ್ ವೇದಿಕೆಗಳನ್ನು ನಿರ್ವಹಿಸುತ್ತಿದ್ದು, ಆಟವನ್ನು ತಿರುಚಿ, ಬಳಕೆದಾರರಿಗೆ ವಂಚಿಸಲಾಗಿದೆ. ನಂತರ ನಕಲಿ ವೆಚ್ಚ ತೋರಿಸಿ, ಅದನ್ನು ನಗದಿನ ರೂಪದಲ್ಲಿ ವಾಪಸ್ ಪಡೆಯಲಾಗಿದೆ’ ಎಂಬುದು ಇ.ಡಿ ಆರೋಪ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-222484860

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.