ಬೆಂಗಳೂರು: ಗಣೇಶನ ಮೂರ್ತಿಯನ್ನು ಕೊಂಡೊಯ್ಯುವ ವೇಳೆ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ಕೊತ್ತನೂರು ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜು ಎದುರು ಗಲಾಟೆ ನಡೆದಿದೆ.

ಶೇಷಾದ್ರಿ(23), ಪ್ರಣವ್ಗೌಡ(19) ಮತ್ತು ಭಾರ್ಗವ್(18) ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.

30ಕ್ಕೂ ಹೆಚ್ಚು ಯುವಕರ ಗುಂಪು ಗಣಪತಿ ಮೂರ್ತಿ ಕೊಂಡೊಯ್ಯುತ್ತಿದ್ದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಆಗಿತ್ತು. ಅದು ವಿಕೋಪಕ್ಕೆ ಹೋದಾಗ ಪರಸ್ಪರ ಹೊಡೆದಾಡಿಕೊಂಡಿದ್ದರು. ಬಳಿಕ ಹೊಯ್ಸಳ ವಾಹನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮೂವರನ್ನು ವಶಕ್ಕೆ ಪಡೆದು ಹೇಳಿಕೆ ದಾಖಲಿಸಿಕೊಂಡು ವಾಪಸ್ ಕಳುಹಿಸಿದ್ದಾರೆ. ಆದರೆ, ಪ್ರಕರಣದಲ್ಲಿ ಕೆಲವೊಂದು ಅನುಮಾನಗಳು ಕಂಡಬಂದ ಕಾರಣಕ್ಕೆ ಸೋಮವಾರ ಸಹ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಈ ಸಂಬಂಧ ಕೊತ್ತನೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.