ಬೆಂಗಳೂರು: ಬಿಹಾರದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿ, ₹3 ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಬಿಹಾರ ರಾಜ್ಯಕ್ಕೆ ಸೇರಿದ್ದು, ಮಾದಕ ವಸ್ತುಗಳನ್ನು ತಂದು ನಗರದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಐ.ಟಿ., ಬಿ.ಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಖಚಿತ ಮಾಹಿತಿ ಮೇರೆಗೆ ಮದ್ದೂರಮ್ಮ ಕಾಲೊನಿಯ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು, 6 ಕೆ.ಜಿ. ಗಾಂಜಾ, ತೂಕದ ಯಂತ್ರ ಮತ್ತು ಕವರ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.