ಬೆಂಗಳೂರು: ಲಗ್ಗೆರೆಯ ರಾಜೀವ್ಗಾಂಧಿ ನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ ಐವರು ಹೊರಕ್ಕೆ ಓಡಿಬಂದು ಅಪಾಯದಿಂದ ಪಾರಾಗಿದ್ದಾರೆ.

ಮೂರು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಹರಗಯ್ಯ ಹಾಗೂ ಭಾಗ್ಯಮ್ಮ ದಂಪತಿ ಮಕ್ಕಳೊಂದಿಗೆ ವಾಸವಾಗಿದ್ದರು. ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಮನೆಗೆ ಹೊಸ ಸಿಲಿಂಡರ್ ಬಂದಿತ್ತು. ಖಾಲಿಯಾಗಿದ್ದ ಹಳೆಯ ಸಿಲಿಂಡರ್ ಬದಲಿಸುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಯನ್ನು ಆವರಿಸಿತ್ತು. ತಕ್ಷಣ ಕುಟುಂಬಸ್ಥರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮನೆಯಲ್ಲಿದ್ದ ದಿನಬಳಕೆ ವಸ್ತುಗಳು ಹಾಗೂ ಪೀಠೋಪಕರಣ ಭಸ್ಮವಾಗಿವೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ಧಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅಕ್ಕಪಕ್ಕದ ಮನೆಗೆ ಬೆಂಕಿ ವ್ಯಾಪಿಸುವುದನ್ನು ನಿಯಂತ್ರಿಸುವಲ್ಲಿ ಯಶಸ್ವಿ ಆಗಿದ್ದಾರೆ.

ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.