ಬೆಂಗಳೂರು: ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಡೇರಹಳ್ಳಿಯ ಸೇತುವೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ ವಾರ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ತನಿಖೆ ಚುರುಕುಗೊಳಿಸಿರುವ ವಿಶೇಷ ಪೊಲೀಸ್ ತಂಡವು, ಆರೋಪಿಗಾಗಿ ಹೊರ ರಾಜ್ಯದಲ್ಲಿ ಹುಡುಕಾಟ ನಡೆಸುತ್ತಿದೆ.

ಆರ್ಟ್ ಆಫ್ ಲಿವಿಂಗ್ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ನೈಸ್ ರಸ್ತೆಯ ಸಮೀಪದಲ್ಲಿಯೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

ಪ್ರಕರಣದ ತನಿಖೆಗೆ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಕೈಗೆತ್ತಿಕೊಂಡಿದ್ದು, ಮಾಹಿತಿ ಕಲೆ ಹಾಕಿ, ತನಿಖೆ ನಡೆಸುತ್ತಿದೆ.

ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತನಿಖಾ ತಂಡವು ಆರೋಪಿಗಾಗಿ ಶೋಧ ನಡೆಸುತ್ತಿದೆ. ನಾಲ್ಕು ತಂಡಗಳು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ತನಿಖೆ ಕೈಗೊಂಡಿವೆ. ಈವರೆಗೆ ಕಗ್ಗಲೀಪುರ, ತಾತಗುಣಿ ಪ್ರದೇಶ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ.

ತನಿಖೆ ವೇಳೆ ಕನಕಪುರ ರಸ್ತೆ ಸಮೀಪದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮಣ್ಣಿನ ರಸ್ತೆಯಿಂದ ಸುಮಾರು 20 ಅಡಿ ದೂರದಲ್ಲಿ ಬ್ಯಾಟರಿ ಪ್ಯಾಕ್, ವೈಯರ್, ಟೇಪ್ಗಳು, ಸರ್ಕಿಟ್ ಬೋರ್ಡ್ನಂತೆ ಕಾಣುವ ವಸ್ತುಗಳು ಪತ್ತೆಯಾಗಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-15-580551157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.